ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದಲ್ಲಿ ಭೀಕರ ಅಪಘಾತವಾಗಿದ್ದು, ಸಾವಿನ ಸಂಖ್ಯೆ 240 ಕ್ಕೆ ಏರಿಕೆಯಾಗಿದೆ.
ರೈಲು ಅಪಘಾತದಲ್ಲಿ ಸಾಕಷ್ಟು ಅಮಾಯಕರು ಪ್ರಾಣ ಕಳೆದುಕೊಂಡಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಅಪಘಾತದ ಸುದ್ದಿಯಿಂದ ನೋವಾಗಿದೆ. ಮೃತರ ಕುಟುಂಬದ ದುಃಖದಲ್ಲಿ ನಾನು ಭಾಗಿಯಾಗುತ್ತೇನೆ. ಗಾಯಗೊಂಡವರು ಶೀಘ್ರವೇ ಚೇತರಿಕೆ ಕಾಣಲಿ ಎಂದು ಹಾರೈಸುತ್ತೇವೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿ ಬೆಂಬಲ ನೀಡುವಂತೆ ಮನವಿ ಮಾಡುತ್ತೇನೆ ಎಂದಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ ಸೂಚಿಸಿದ್ದು, ಅಪಘಾತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಕುಟುಂಬಗಳ ಜೊತೆ ನಾನಿದ್ದೇನೆ, ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹೇಳಿದ್ದಾರೆ. ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ಕೂಡ ಸಂತಾಪ ಸೂಚಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.