Wednesday, August 17, 2022

Latest Posts

ಕೊರೋನಾ 3 ನೇ ಅಲೆ ನಿಯಂತ್ರಣಕ್ಕೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಚಿವೆ ಶೋಭಾ ಸೂಚನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಚಿಕ್ಕಮಗಳೂರು:

ಜಿಲ್ಲೆಯಲ್ಲಿ ಅತೀವೃಷ್ಠಿ ಹಾಗೂ ಕೊರೋನಾ 3 ನೇ ಅಲೆ ನಿಯಂತ್ರಣ ಸಂಬಂಧ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಉಡುಪಿ-ಚಿಕ್ಕಮಗಳುರು ಸಂಸದರೂ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸೂಚಿಸಿದರು.
ಅವರು ಶುಕ್ರವಾರ ಬೆಳಗ್ಗೆ ದೆಹಲಿಯ ಕೃಷಿ ಭವನದಿಂದ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಇನ್ನಿತರೆ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ನಡೆಸಿದರು.
ಅಧಿಕ ಮಳೆ ಹಾಗೂ ಕೊರೋನಾ ಸೋಂಕಿನಂತಹ ಸಂದರ್ಭದಲ್ಲಿ ಜನರ ಕಷ್ಟ ನಷ್ಟಗಳಿಗೆ ಧಾವಿಸುವ ಸಂದರ್ಭ ಒದಗಿಬಂದರೆ ಸೂಕ್ತ ವ್ಯವಸ್ಥೆ ಹೊಂದಿಸಿಕೊಳ್ಳುವಂತೆ ಸಚಿವರು ಜಿಲ್ಲಾಡಳಿತಕ್ಕೆ ಸೂಚಿಸಿದರು.ತಿಳಿಸಿದರು.
ಕೃಷಿ ಚಟುವಟಿಗೆಗೆ ಸಂಬಂಧಿಸಿದಂತೆ ಯಾವುದೇ ತೊಡಕುಗಳು ಆಗದಂತೆ ಮುಂಜಾಗ್ರತೆ ವಹಿಸಬೇಕು. ಬಿತ್ತನೆ ಬೀಜ ಸಲಕರಣೆಗಳು ರಸಗೊಬ್ಬರವನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನಿರಿಸಿಕೊಳ್ಳಬೇಕು ಎಂದು ತಿಳಿಸಿದರು.
ಕೊರೋನಾ ನಿಯಂತ್ರಣ ಕ್ರಮಗಳ ಬಗ್ಗೆ ಮಾಹಿತಿ ಪಡೆದ ಅವರು, ಚಿಕ್ಕಮಗಳೂರು ಜಿಲ್ಲಾ ಕೇಂದ್ರ ಹಾಗೂ ಕಡೂರು ಮತ್ತು ಕೊಪ್ಪದಲ್ಲಿ ಆದಷ್ಟು ಬೇಗನೆ ಆಕ್ಸಿಜನ್ ಪ್ಲಾಂಟ್ ಕಾರ್ಯಾರಂಭ ಮಾಡಬೇಕು ಎಂದು ತಿಳಿಸಿದರು.
ವಾರಾಂತ್ಯದ ದಿನಗಳಲ್ಲಿ ಪ್ರವಾಸಿಗರ ಭೇಟಿಯಿಂದ ಕೊರೋನಾ ಹೆಚ್ಚಾಗುವ ಕುರಿತು ಜಿಲ್ಲೆಯ ಜನತೆಯಲ್ಲಿ ಹೆಚ್ಚು ಚರ್ಚೆಗಳಾಗಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿ ಸ್ಥಳಗಳಲ್ಲಿ ಕೋವಿಡ್ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವ ಸಂಬಂಧ ನಿಗಾ ವಹಿಸಲು ಸಿಬ್ಬಂಧಿಗಳನ್ನು ನೇಮಿಸಬೇಕು. ವಾರಾಂತ್ಯದಲ್ಲಿ ಪ್ರವಾಸಿಗರಿಗೆ ನಿರ್ಧಿಷ್ಟ ಸಮಯ ನಿಗಧಿಮಾಡಿ ವಾಹನ ದಟ್ಟಣೆ ಆಗದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!