spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊರೋನಾ 3ನೇ ಅಲೆ ಭೀತಿ: ಶ್ರೀರಂಗಪಟ್ಟಣದ ಶ್ರೀರಂಗ-ನಿಮಿಷಾಂಬ ದೇವಾಲಯಕ್ಕೆ ಭಕ್ತರ ನಿರ್ಬಂಧ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………

ಹೊಸ ದಿಗಂತ ವರದಿ, ಶ್ರೀರಂಗಪಟ್ಟಣ:

ಕೊರೋನಾ 3ನೇ ಅಲೆ ವ್ಯಾಪಕವಾಗಿ ಹೆಚ್ಚಾಗುತ್ತಿರುವ ಹಿನ್ನಲೆ ಈಗಾಗಲೇ 2ನೇ ಅಲೆ ಕಡಿಮೆಯಾಗುತ್ತಿರುವ ಬೆನ್ನಲೆ ಪಟ್ಟಣದ ಶ್ರೀರಂಗನಾಥಸ್ವಾಮಿ , ಗಂಜಾಂನ ನಿಮಿಷಾಂಬ ಹಾಗೂ ಶಕ್ತಿ ದೇವತಾ ಕೇಂದ್ರ ಆರತಿ ಉಕ್ಕಡ ದೇಗುಲಕ್ಕೆ ವಿಶೇಷ ದಿನಗಳಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ತಾಲೂಕು ಆಡಳಿತ ಆದೇಶ ಹೊರಡಿಸಿದೆ.
ಜಿಲ್ಲೆಯ ಪ್ರಮುಖ ಪ್ರವಾಸಿ ತಾಣ ಹಾಗೂ ದೇವಾಲಯಗಳ ನಗರವಾಗಿರುವ ಶ್ರೀರಂಗಪಟ್ಟಣಕ್ಕೆ ದಿನದಿಂದ ದಿನಕ್ಕೆ ಭಕ್ತರು ಹಾಗೂ ಪ್ರವಾಸಿಗರು ಸಾಕಷ್ಟು ಸಂಖ್ಯೆಯಲ್ಲಿ ಭೇಟಿ ನೀಡಿ ಅಧಿಕ ಪ್ರಮಾಣದಲ್ಲಿ ಜನದಟ್ಟಣೆ ಹೆಚ್ಚಾಗುತ್ತಿರುವ ಹಿನ್ನಲೆ ಕೋವಿಡ್ 3ನೇ ಅಲೆ ಹರಡುವಿಕೆಯ ನಿಯಂತ್ರಣಕ್ಕೆ ಭಕ್ತರು ಹಾಗೂ ಸಾರ್ವಜನಿಕರ ಪ್ರವೇಶ ನಿರ್ಭಂದಿಸಿ ಆದೇಶಿಸಲಾಗಿದೆ.
ಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಾಲಯಕ್ಕೆ ಬುಧವಾರ, ಶನಿವಾರ ಹಾಗೂ ಭಾನುವಾರ ಸೇರಿದಂತೆ ಸಾರ್ವಜನಿಕ ರಜಾ ದಿನ, ಗಂಜಾಂನ ಪ್ರಸಿದ್ದ ನಿಮಿಷಾಂಭ ಹಾಗೂ ಶಕ್ತಿ ದೇವತಾ ಕೇಂದ್ರ ಆರತಿಉಕ್ಕಡ ದೇಗುಲಕ್ಕೆ ಅಮವಾಸೆ, ಹುಣ್ಣಿಮೆ, ಮಂಗಳವಾರ, ಶುಕ್ರವಾರ ಹಾಗೂ ಭಾನುವಾರ ಸೇರಿದಂತೆ ಸರ್ಕಾರಿ ರಜಾದಿನಗಳಲ್ಲಿ ಜಿಲ್ಲಾಡಳಿತದ ಸೂಚನೆ ಮೇರೆಗೆ ಕಡ್ಡಾಯವಾಗಿ ನಿರ್ಬಂದ ವಿಧಿಸಿ ತಹಸೀಲ್ದಾರ್ ಶ್ವೇತಾ ಎನ್ ರವೀಂದ್ರ  ಆದೇಶ ಹೊರಡಿಸಿದ್ದಾರೆ.
ಎಂದಿನಂತೆ ನಿತ್ಯ ಅರ್ಚಕರುಗಳಿಂದ ಪೂಜಾ ಕೈಕಂರ್ಯಗಳು ದೇವಾಲಯದ ಒಳಗೆ ನಡೆಯಲಿವೆ. ಉಳಿದ ದಿನಗಳಲ್ಲಿ ಭಕ್ತರು ಹಾಗೂ ಸಾರ್ವಜನಿಕರು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಕಡ್ಡಾಯ ಮಾಸ್ಕ್, ಸಾಮಾಜಿಕ ಅಂತರ ಪಾಲಿಸಿಕೊಂಡು ದೇವರದರ್ಶನ ಪಡೆಯುವಂತೆ ಅವರು ಸೂಚಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss