ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದಲ್ಲಿ ಕೊರೋನಾ ಅಬ್ಬರ: ವಿಧಾನಸೌಧ, ವಿಕಾಸಸೌಧಕ್ಕೆ ನೋ ಎಂಟ್ರಿ!

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ವಿಧಾನಸೌಧ ಸಿಬ್ಬಂದಿ ಆಡಳಿತ ಸುಧಾರಣಾ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲೂ ಸೋಂಕು ಪತ್ತೆಯಾಗುತ್ತಿವೆ ಎನ್ನಲಾಗಿದೆ.ಈ ನಿಟ್ಟಿನಲ್ಲಿ, ಪೂರ್ವಾನುಮತಿಯಿಲ್ಲದೇ ಯಾರೂ ಕೂಡ ಪ್ರವೇಶವಿಸುವಂತಿಲ್ಲ ಅಂತಾ ಸೂಚಿಸಲಾಗಿದೆ.
ಮೊದಲಿದ್ದ 3. 30ರ ಸಾರ್ವಜನಿಕರ ಪ್ರವೇಶಕ್ಕೂ ಕೆಲ ನಿಯಮಗಳು ಜಾರಿ ಮಾಡಲಾಗಿದೆ. ಸಚಿವರ ಆಪ್ತ ಕಾರ್ಯದರ್ಶಿಗಳಿಂದ ಪ್ರವೇಶ ಪತ್ರದ ಅನುಮತಿಯಿದ್ದರೆ ಮಾತ್ರ ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಲಾಗುತ್ತೆ. ರೆಫರೆನ್ಸ್ ಇಲ್ಲದೇ ಯಾರೂ ವಿಧಾನಸೌಧಕ್ಕೆ ಭೇಟಿ ನೀಡುವಂತಿಲ್ಲ ಅಂತಾ ಸೂಚನೆ ನೀಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss