ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಇಂದು 22 ಮಂದಿಯಲ್ಲಿ ಕೋವಿಡ್ 19 ಪಾಸಿಟಿವ್ ಇರುವುದು ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ ಇಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ( Karnataka Health Department ) ಮಾಹಿತಿ ನೀಡಲಾಗಿದ್ದು, ರಾಜ್ಯದಲ್ಲಿ 808 ಮಂದಿಗೆ ಕೋವಿಡ್ ಟೆಸ್ಟ್ (Covid Test) ನಡೆಸಲಾಗಿದೆ.
ಬೆಂಗಳೂರಿನಲ್ಲಿ19 ಜನರಿಗೆ ಕೊರೋನಾ ಪಾಸಿಟಿವ್ ( Corona Positive )ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು ಅವರಲ್ಲಿ ಒಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದೆ.
ಬಳ್ಳಾರಿಯಲ್ಲಿ ಇಬ್ಬರಿಗೂ ಕೋವಿಡ್ ಪಾಸಿಟಿವ್ ಎಂದು ವರದಿಯಲ್ಲಿ ತಿಳಿದು ಬಂದಿದೆ. ಹೀಗಾಗಿ ಇಂದು ರಾಜ್ಯಾಧ್ಯಂತ 22 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಮಾಹಿತಿ ನೀಡಿದೆ.
ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 92ಕ್ಕೆ ಏರಿದೆ. 20 ಸೋಂಕಿತರು ಆಸ್ಪತ್ರೆಯಲ್ಲಿದ್ದಾರೆ. ಈ ಪೈಕಿ 7 ಮಂದಿ ಐಸಿಯುನಲ್ಲಿದ್ದಾರೆ. 72 ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ. ಐವರು ಈಗಾಗಲೇ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಪಾಸಿಟಿವಿಟಿ ರೇಟ್ 2.47% ರಷ್ಟಿದೆ.