SHOCKING | ಮತ್ತೆ ಕೊರೋನಾ ಅಲರ್ಟ್: ಕೇರಳದ ಮಹಿಳೆಯಲ್ಲಿ ಕೋವಿಡ್ ಉಪತಳಿ ಜೆಎನ್.1 ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದ (Kerala) ಕಳೆದ ಕೆಲವು ದಿನಗಳಿಂದ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಇದೀಗ ಮಹಿಳೆಯೊಬ್ಬರಲ್ಲಿ ಕೋವಿಡ್-‌19 ಉಪತಳಿ (Covid Subvariant) ಜೆಎನ್‌.1 (JN.1) ಪತ್ತೆಯಾಗಿರುವುದು ದೃಢಪಟ್ಟಿದೆ.

ನವೆಂಬರ್ 18 ರಂದು 79 ವರ್ಷದ ಮಹಿಳೆಯ ಗಂಟಲು ಮಾದರಿಯನ್ನು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಿಗೆ ಹೊಸ ಉಪತಳಿಯ ಸೋಂಕಿರುವುದು ಪತ್ತೆಯಾಗಿದೆ.

ಅವರಲ್ಲಿ influenza-like illnesses (ILI- ಇನ್ಫ್ಲುಯೆನ್ಝಾ ತರಹದ ಕಾಯಿಲೆ) ಸೌಮ್ಯ ಲಕ್ಷಣ ಕಂಡುಬಂದಿದೆ. ಕೋವಿಡ್-19 ನಿಂದ ಅವರು ಚೇತರಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೊರೋನಾ ವೈರಲ್‌ ಉಪತಳಿ ಜೆಎನ್‌.1 ವಿಶ್ವದಲ್ಲೇ ಮೊದಲ ಪ್ರಕರಣ ಅಮೆರಿಕದಲ್ಲಿ ಪತ್ತೆಯಾಯಿತು. ಭಾರತದಲ್ಲಿ ಪ್ರಸ್ತುತ ಕೋವಿಡ್-19 ಪ್ರಕರಣಗಳಲ್ಲಿ 90% ಕ್ಕಿಂತ ಹೆಚ್ಚು ಪ್ರಕರಣಗಳನ್ನು ಸೌಮ್ಯ ಎಂದು ವರ್ಗೀಕರಿಸಲಾಗಿದೆ.

ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯ ಪ್ರಯಾಣಿಕರೊಬ್ಬರಲ್ಲಿ ಸಿಂಗಾಪುರದಲ್ಲಿ ಜೆಎನ್.1 ಉಪತಳಿ ಪತ್ತೆಯಾಗಿತ್ತು. ಅವರು ಅಕ್ಟೋಬರ್ 25 ರಂದು ಸಿಂಗಾಪುರಕ್ಕೆ ಭೇಟಿ ನೀಡಿದ್ದರು.

JN.1 ಉಪತಳಿಯು ಹಿಂದಿನ ಉಪತಳಿಗಳ ಲಕ್ಷಣವನ್ನೇ ಹೊಂದಿದೆ. JN.1 ಸಬ್‌ವೇರಿಯಂಟ್‌ನ ಬಹುಪಾಲು ರೂಪಾಂತರಗಳು ಸ್ಪೈಕ್ ಪ್ರೋಟೀನ್‌ನಲ್ಲಿ ಕೇಂದ್ರೀಕೃತವಾಗಿರುತ್ತವೆ. ಇದು ಸೋಂಕನ್ನು ತೀವ್ರಗೊಳಿಸುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!