ಎಲ್ಲೆಡೆ ಕೊರೋನಾ ಆತಂಕ, ರಾಜ್ಯದಲ್ಲಿ ನಿತ್ಯ ಐದು ಸಾವಿರ ಕೋವಿಡ್ ಪರೀಕ್ಷೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಕೊರೋನಾ ಭೀತಿ ಮತ್ತೆ ಎದುರಾಗಿದ್ದು, ಪರಿಸ್ಥಿತಿ ಬಿಗಡಾಯಿಸದಂತೆ ನೋಡಿಕೊಳ್ಳಲು ದಿನಕ್ಕೆ ಐದು ಸಾವಿರ ಕೋವಿಡ್ ಪರೀಕ್ಷೆ ಮಾಡಲಾಗುತ್ತದೆ.

ಈಗಾಗಲೇ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿ ತೀರ್ಮಾನ ಪ್ರಕಟಿಸಿದೆ. ಇದರ ಬೆನ್ನಲ್ಲೇ ಕೋವಿಡ್ ತಪಾಸಣೆ ಸಂಖ್ಯೆ ಹೆಚ್ಚು ಮಾಡಲು ಸರ್ಕಾರ ನಿರ್ಧರಿಸಿದೆ.

ಡಿ.23ರಿಂದ ರಾಜ್ಯದಲ್ಲಿ ಪ್ರತಿನಿತ್ಯ ಐದು ಸಾವಿರ ಪರೀಕ್ಷೆ ನಡೆಸಲಾಗುತ್ತದೆ. ಆಕ್ಸಿಜನ್, ವೆಂಟಿಲೇಟರ್ ಹಾಗೂ ಐಸಿಯು ಬೆಡ್‌ಗಳನ್ನು ಸದಾ ತಯಾರಿಡುವಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ಜತೆ ಮಾತನಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಕೇರಳದಲ್ಲಿ ಕೋವಿಡ್ ಸಂಖ್ಯೆ ಹೆಚ್ಚುತ್ತಿದ್ದಂತೆಯೇ ರಾಜ್ಯದಲ್ಲಿ ನಿನ್ನೆ 44 ಕೋವಿಡ್ ಕೇಸ್ ಪತ್ತೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!