ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಕಾಂಗ್ರೆಸ್ ನಾಯಕಿ, ಮಾಜಿ ಐಎಎಸ್ ಅಧಿಕಾರಿ ದಿವಂಗತ ಡಿ.ಕೆ ರವಿ ಅವರ ಪತ್ನಿ ಕುಸುಮಾ ಹನುಮಂತರಾಯಪ್ಪ ಅವರಿಗೆ ಕೊರೋನಾ ದೃಢಪಟ್ಟಿದ್ದು, ಮನೆಯಲ್ಲಿಯೇ ಐಸೋಲೇಟ್ ಆಗಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಕುಸುಮಾ, ನನ್ನ ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿರುವ ಕಾರಣ ಮನೆಯಲ್ಲಿಯೇ ಐಸೋಲೇಟ್ ಆಗಿದ್ದು, ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದಿದ್ದಾರೆ.
ಮಹಾಮಾರಿ ಕೊರೋನ ಎರಡನೇ ಅಲೆಯು ತೀವ್ರತರವಾಗಿದ್ದು ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ತಮ್ಮ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕೆಂದು ಮನವಿ ಮಾಡಿದ್ದಾರೆ.