ಕೊಡಗು ಜಿಲ್ಲೆಯಲ್ಲಿ ಕೊರೋನಾ ಮಹಾಸ್ಫೋಟ: ಒಂದೇ ದಿನ 428 ಹೊಸ ಪ್ರಕರಣ ದೃಢ

ದಿಗಂತ ವರದಿ ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಕೊರೋನಾ ಮಹಾಸ್ಫೋಟ ಸಂಭವಿಸಿದ್ದು, ಒಂದೇ ದಿನ 428 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದೆ.
ಬುಧವಾರ ಪೂರ್ವಾಹ್ನ 11ಗಂಟೆಗೆ ಕೊನೆಗೊಂಡಂತೆ ಕಳೆದ 24ಗಂಟೆಗಳಲ್ಲಿ 397 ಪ್ರಕರಣಗಳು ಆರ್‍ಟಿಪಿಸಿಆರ್ ಮತ್ತು 31 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿನ‌ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 1195ಕ್ಕೆ ಏರಿಕೆಯಾಗಿದೆ.
ಕಳೆದ 24ಗಂಟೆಗಳಲ್ಲಿ ಮಡಿಕೇರಿ ತಾಲೂಕಿನಲ್ಲಿ 117, ವೀರಾಜಪೇಟೆ ತಾಲೂಕಿನಲ್ಲಿ 110, ಸೋಮವಾರಪೇಟೆ ತಾಲೂಕಿನಲ್ಲಿ 201 ಹೊಸ ಕೋವಿಡ್ ಪ್ರಕರಣಗಳು ಕಂಡುಬಂದಿದೆ. ಕುಶಾಲನಗರ ಸರಕಾರಿ ಪಾಲಿಟೆಕ್ನಿಕ್ ಕಾಲೇಜು ಒಂದರಲ್ಲೇ 33ಪ್ರಕರಣಗಳು ವರದಿಯಾಗಿದೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೋವಿಡ್- ಸೋಂಕಿತರ ಸಂಖ್ಯೆ 37,262ರಷ್ಟಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 49 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದುವುದರೊಂದಿಗೆ ಇದುವರೆಗೆ ಒಟ್ಟು 35,629 ಮಂದಿ ಗುಣಮುಖರಾದಂತಾಗಿದೆ.
ಇದುವರೆಗೆ ಒಟ್ಟು 438 ಮಂದಿ ಸಾವಿಗೀಡಾಗಿದ್ದು, ಪ್ರಸಕ್ತ 1195 ಸಕ್ರಿಯ ಪ್ರಕರಣಗಳಿವೆ. ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 166 ಹಾಗೂ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.12.27ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!