Monday, August 15, 2022

Latest Posts

ಕೊರೋನಾ ಪ್ರಕರಣ ಹೆಚ್ಚಳ: ಕ್ಯಾಂಪ್ಕೊ ಖರೀದಿ ಸ್ಥಗಿತ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..

ಹೊಸದಿಗಂತ ವರದಿ,ಮಂಗಳೂರು:

ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ಕ್ಯಾಂಪ್ಕೊ ಖರೀದಿ ಸ್ಥಗಿತಗೊಂಡಿದೆ. ಹೆಚ್ಚುತ್ತಿರುವ ಕೋವಿಡ್ ಪಾಸಿಟಿವ್ ಪ್ರಕರಣಗಳನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಕರ್ನಾಟಕ ಮತ್ತು ಕೇರಳದಲ್ಲಿ ರಾಜ್ಯ ಸರಕಾರಗಳು ಕಠಿಣವಾದ ನಿಯಮಗಳನ್ನು ಹೇರಿದ್ದು ಲಾಕ್ಡೌನ್ ಜಾರಿಗೆ ತರಲಾಗಿದೆ. ಈ ಹಿನ್ನೆಲೆಯಲ್ಲಿ ಕ್ಯಾಂಪ್ಕೊ ಕೂಡ ಈಗಾಗಲೇ ತನ್ನ ಖರೀದಿ ಪ್ರಕ್ರಿಯೆಗೆ ಕೆಲವೊಂದು ನಿಯಮಗಳನ್ನು ವಿಧಿಸಿ ಕಾರ್ಯಾಚರಿಸುತ್ತಿದ್ದು, ಪ್ರಸ್ತುತ ಪರಿಸ್ಥಿತಿಯಲ್ಲಿ ತನ್ನ ಸದಸ್ಯರ ಮತ್ತು ಸಿಬ್ಬಂದಿಯ ಆರೋಗ್ಯದ ಹಿತದೃಷ್ಟಿಯಿಂದ ಮತ್ತು ರೋಗ ಹರಡುವಿಕೆಯ ನಿಯಂತ್ರಣಕ್ಕಾಗಿ ಸರಕಾರಗಳ ಪ್ರಯತ್ನವನ್ನು ಬೆಂಬಲಿಸಿ ತಾತ್ಕಾಲಿಕವಾಗಿ ತನ್ನ ಎಲ್ಲಾ ವಹಿವಾಟುಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ. ಅದರಂತೆ ಮೇ 11ರಿಂದ ಮೇ15ರ ವರೆಗೆ ಎರಡೂ ರಾಜ್ಯಾದ್ಯಂತ ಸಂಸ್ಥೆಯ ಯಾವುದೇ ಶಾಖೆಗಳಲ್ಲಿ ಸರಕು ಖರೀದಿ ಸಹಿತ ಯಾವುದೇ ವಹಿವಾಟುಗಳು ನಡೆಯುವುದಿಲ್ಲ
ಅಧ್ಯಯನದ ಪ್ರಕಾರ ಅಡಿಕೆಯ ಗ್ರಾಹಕ ಮಾರುಕಟ್ಟೆಯಲ್ಲಿನ ಬೇಡಿಕೆಯಲ್ಲಿ ಯಾವುದೇ ಬದಲಾವಣೆಗಳಿಲ್ಲದಿರುವುದರಿಂದ, ಅಡಿಕೆಯ ದರದ ಬಗ್ಗೆ ಬೆಳೆಗಾರರು ಯಾವುದೇ ಆತಂಕ ಪಡಬೇಕಾಗಿಲ್ಲ. ಮಾರುಕಟ್ಟೆಯನ್ನು ಬುಡಮೇಲುಗೊಳಿಸುವ ಯಾವುದೇ ಹುನ್ನಾರಗಳನ್ನು ಕ್ಯಾಂಪ್ಕೊ ಖಂಡಿಸುತ್ತದೆ. ಅಡಿಕೆ ಬೆಳೆಗಾರರು ಮಾರುಕಟ್ಟೆಯನ್ನು ಅಸ್ಥಿರಗೊಳಿಸುವ ಯಾವುದೇ ವದಂತಿಗಳಿಗೆ ಸೊಪ್ಪು ಹಾಕದೇ, ಸಹನೆಯನ್ನು ಕಾಯ್ದುಕೊಳ್ಳಬೇಕಾಗಿ ಸಂಸ್ಥೆಯ ಅಧ್ಯಕ್ಷ
ಕಿಶೋರ್ ಕುಮಾರ್ ಕೊಡ್ಗಿ ಮನವಿ ಮಾಡಿದ್ದಾರೆ.
ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಗಮನಿಸಿಕೊಂಡು ಸರಕಾರದ ನಡೆಗಳ ಅನುಸಾರ ಖರೀದಿ ಪ್ರಕ್ರಿಯೆಯನ್ನು ಪುನರಾರಂಭಿಸುವ ಎಲ್ಲ ಪ್ರಯತ್ನಗಳನ್ನು ಸಂಸ್ಥೆಯು ಮಾಡಲಿದೆ ಮತ್ತು ಮುಂದಿನ ದಿನಗಳಲ್ಲಿ ತನ್ನ ಸದಸ್ಯರಿಗೆ ಇನ್ನೂ ಹೆಚ್ಚಿನ ಸೌಲಭ್ಯಗಳನ್ನು ನೀಡುವ ಬಗ್ಗೆ ಸಂಸ್ಥೆಯ ಆಡಳಿತ ಮಂಡಳಿ ತೀರ್ಮಾನಗಳನ್ನು ತೆಗೆದುಕೊಳ್ಳಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಲಿ ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ.ಕೃಷ್ಣ ಕುಮಾರ್ ಮತ್ತು ಆಡಳಿತ ಮಂಡಳಿಯವರು ತಿಳಿಸಿದ್ದು, ಸದಸ್ಯ ಬೆಳೆಗಾರರು ಇದನ್ನು ಗಮನಿಸಿ ಸಹಕರಿಸಬೇಕಾಗಿ ವಿನಂತಿ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss