Wednesday, September 27, 2023

Latest Posts

ಮಹಾರಾಷ್ಟ್ರದಲ್ಲಿ ಕೊರೋನಾ ಪ್ರಕರಣ ಹೆಚ್ಚಳ: 24 ಗಂಟೆಗಳಲ್ಲಿ 711 ಕೇಸ್ ದಾಖಲು, 4 ಮಂದಿ ಸಾವು!

ಹೊಸದಿಗಂತ ಡಿಜಿಟಲ್‌ ಡೆಸ್ಕ್ :
 
ದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ನೆರೆಯ ಮಹಾರಾಷ್ಟ್ರದಲ್ಲಿ ಅಧಿಕ ಕೇಸ್ ಗಳು ವರದಿಯಾಗಿವೆ.

ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 711 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.ಸೋಂಕಿನಿಂದ 4 ಮಂದಿ ಸಾವನ್ನಪ್ಪಿದ್ದು, ಸಕ್ರಿಯ ಪ್ರಕರಣಗಳ ಪಾಸಿಟಿವಿಟಿ ದರವು ಒಂದೇ ದಿನದಲ್ಲಿ 186 ಪ್ರತಿಶತದಷ್ಟು ಜಿಗಿತವಾಗಿದೆ.

ಕಳೆದ ಏಳು ದಿನಗಳಲ್ಲಿ ರಾಜ್ಯದಲ್ಲಿ 11 ಸಾವುಗಳು ಸಂಭವಿಸಿವೆ. ರಾಜ್ಯದಲ್ಲಿ ಸಾವಿನ ಪ್ರಮಾಣವು ಪ್ರಸ್ತುತ ಶೇಕಡಾ 1.82 ರಷ್ಟಿದೆ ಎಂದು ತಿಳಿದು ಬಂದಿದೆ.

ಕೋವಿಡ್ ಪ್ರಕರಣದ ಉಲ್ಬಣದ ಹಿನ್ನೆಲೆಯಲ್ಲಿ ಮುಂದಿನ ವಾರ (ಏಪ್ರಿಲ್ 13 ಮತ್ತು 14) ರಾಜ್ಯದಲ್ಲಿ ಅಣಕು ಡ್ರಿಲ್ ನಡೆಸಲಾಗುವುದು ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ತಾನಾಜಿ ಸಾವಂತ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!