ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮತ್ತೆ ಕೊರೋನಾ ಸಕ್ರಿಯವಾಗಿದೆ. ದಿನದಿಂದ ದಿನಕ್ಕೆ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಳವಾಗ್ತಿದ್ದು, ಮೊದಲ ಬಲಿಯನ್ನು ಪಡೆದಿದೆ.
ರಾಜ್ಯದಲ್ಲಿ ಸದ್ಯ ಸಕ್ರಿಯ ಪ್ರಕರಣ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. 46 ಮಂದಿ ಹೋಮ್ ಐಸೋಲೇಶನಲ್ಲಿದ್ದು, ಓರ್ವ ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆ ಕಳೆದ 24 ಗಂಟೆಯಲ್ಲಿ 104 ಮಂದಿಯನ್ನು ಟೆಸ್ಟ್‌ಗೆ ಒಳಪಡಿಸಿದೆ. ಕಳೆದ 24 ಗಂಟೆಯಲ್ಲಿ 9 ಹೊಸ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರೋ ಹಿನ್ನೆಲೆ ಕೊರೋನಾ ಟೆಸ್ಟ್‌ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದು, ಇಂದಿನಿಂದಲೇ ಆರಂಭವಾಗಿದೆ. ಅದರಲ್ಲೂ ಉಸಿರಾಟ ಮತ್ತು ಹೃದಯ ಸಂಬಂಧಿ ಸಮಸ್ಯೆ ಇರುವವರಿಗೆ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಒಂದು ತಿಂಗಳಿಗಾಗುವಷ್ಟು ಟೆಸ್ಟ್ ಕಿಟ್ ತೆಗೆದಿಡುವಂತೆ ಎಲ್ಲ ಆಸ್ಪತ್ರೆಗಳಿಗೆ ಆರೋಗ್ಯ ಸಚಿವರು ಸೂಚನೆ ನೀಡಿದ್ದಾರೆ.