ದೇಶದಲ್ಲಿ ದಿನೇ ದಿನೇ ಹೆಚ್ಚುತ್ತಿದೆ ಕೊರೋನಾ: ಮಹತ್ವದ ಸೂಚನೆ ನೀಡಿದ ಕೇಂದ್ರ ಆರೋಗ್ಯ ಇಲಾಖೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ಭಾರತದಲ್ಲಿ ಪ್ರತಿ ದಿನ ಸರಾಸರಿ 8 ಸಾವಿರ ಕೋವಿಡ್ ಪ್ರಕರಣ ದಾಖಲಾಗುತ್ತಿದ್ದು, ಆತಂಕ ಹೆಚ್ಚಾಗಲು ಕಾರಣವಿದೆ. ದರ ಬೆನ್ನಲ್ಲೇ ಕೇಂದ್ರ ಆರೋಗ್ಯ ಇಲಾಖೆ ಮಹತ್ವದ ಸೂಚನೆ ನೀಡಿದೆ. ಎಲ್ಲರೂ ಬೂಸ್ಟರ್ ಡೋಸ್ ಪಡೆದುಕೊಳ್ಳಲು ಸೂಚಿಸಿದ್ದಾರೆ.
ಮುಂಬೈನಲ್ಲಿ ಇದೀಗ ಕೋವಿಡ್ ಕಾರಣದಿಂದ ಪ್ರತಿ ದಿನ ಆಸ್ಪತ್ರೆ ದಾಖಲಾಗುವವರ ಸಂಖ್ಯೆ 100ರ ಗಡಿ ದಾಟಿದೆ. ಇದು ಆತಂಕ ಹೆಚ್ಚಾಗುವಂತೆ ಮಾಡಿದೆ. ಭಾರತದಲ್ಲಿ 2ನೇ ಅಲೆ ಬಳಿಕ 3ನೇ ಅಲೆಯಲ್ಲಿ ಕೋವಿಡ್ ಪ್ರಕರಣ ಸಂಖ್ಯೆ ಹೆಚ್ಚಾಗಿತ್ತು. ಆದರೆ ಆಸ್ಪತ್ರೆ ದಾಖಲಾಗುವವರ ಸಂಖ್ಯೆ ಏರಿಕೆಯಾಗಿರಲಿಲ್ಲ. ಹೀಗಾಗಿ ತಜ್ಞ ವೈದ್ಯರು ಯಾವುದೇ ಆತಂಕ ಪಡಬೇಕಿಲ್ಲ ಎಂದು ಅಭಯ ನೀಡಿದ್ದರು. ಆದರೆ ಇದೀಗ 4ನೇ ಅಲೆ ಭೀತಿ ಹೆಚ್ಚಾಗುತ್ತಿದ್ದಂತೆ ಆಸ್ಪತ್ರೆ ದಾಖಲಾಗುವ ಸಂಖ್ಯೆ ಗಣನೀಯ ಏರಿಕೆಯಾಗುತ್ತಿರುವುದು ಕಳವಳಕ್ಕೆ ಕಾರಣವಾಗಿದೆ.
ಭಾರತದಲ್ಲಿ ಕೋವಿಡ್ ಪ್ರಕರಣ ಏರಿಕೆ ಬೆನ್ನಲ್ಲೇ ಕೇಂದ್ರ ಆರೋಗ್ಯ ಸಚಿವ ಮನ್ಸೂಕ್ ಮಾಂಡವಿಯಾ ಮಹತ್ವದ ಸೂಚನೆ ನೀಡಿದ್ದಾರೆ. ಕೊರೋನಾ ಇನ್ನೂ ಮುಗಿದಿಲ್ಲ, ಕೋವಿಡ್ ಮಾರ್ಗಸೂಚಿಗಳನ್ನು ಅಗತ್ಯವಾಗಿಯೂ ಪಾಲಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದಿದ್ದಾರೆ.
ಶಾಲಾ ಮಕ್ಕಳಿಗೆ ಲಸಿಕೆ ಹಾಕಿಸಲು ಪೋಷಕರಿಗೆ ಸೂಚನೆ ನೀಡಿದ್ದಾರೆ. ಇದೇ ವೇಳೆ ವಯಸ್ಕರು ಬೂಸ್ಟರ್ ಡೋಸ್ ಪಡೆದುಕೊಳ್ಳಲು ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!