ರಾಜ್ಯದಲ್ಲಿಯೂ ಕೊರೋನಾ ಕಂಟಕ: ಹೈವೋಲ್ಟೇಜ್ ಸಭೆ ಕರೆದ ಸಿಎಂ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಮತ್ತೆ ಕೋವಿಡ್ ಕಂಟಕ ಎದುರಾಗುವ ಎಲ್ಲ ಸಾಧ್ಯತೆಗಳು ಕಾಣಿಸುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಹೈವೋಲ್ಟೇಜ್ ಸಭೆ ಕರೆದಿದ್ದಾರೆ.

ಕಳೆದ ೨೪ ಗಂಟೆಯಲ್ಲಿ ಮತ್ತೆ 44 ಕೊರೋನಾ ಕೇಸ್ ಪತ್ತೆಯಾಗಿದೆ. ರಾಜ್ಯದ ಜನತೆಯಲ್ಲಿ ಆತಂಕ ಹೆಚ್ಚಾಗಿದ್ದು, ಇಂದು ಮಧ್ಯಾಹ್ನ ಸಿಎಂ ಸಭೆ ಕರೆದಿದ್ದಾರೆ.

ಈ ಸಭೆಯ ನಂತರ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿಯಾಗುವ ಎಲ್ಲ ಸಾಧ್ಯತೆಗಳೂ ಇವೆ. ಮಧ್ಯಾಹ್ನ ಒಂದು ಗಂಟೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಲಿದ್ದು, ರಾಜ್ಯದಲ್ಲಿ ಯಾವೆಲ್ಲಾ ಕ್ರಮ ಕೈಗೊಳ್ಳಬೇಕು? ಮಾಸ್ಕ್ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!