ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಕೊರೋನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮೇ. 12 ರವರಗೆ ವಿಧಿಸಿರುವ ಕರ್ಪ್ಯೂ ನಿರೀಕ್ಷಿತ ಫಲ ನೀಡದೆ ಇರುವ ಕಾರಣ ಮೇ. 12 ರ ಬಳಿಕ ಸಂಪೂರ್ಣ ಲಾಕ್ ಡೌನ್ ಮಾಡುವ ಬಗ್ಗೆ ಸರಕಾರ ಚಿಂತನೆ ನಡೆಸುತ್ತಿದ್ದು, ಈ ಹಿನ್ನೆಲೆ ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ ಸಂಜೆ 6 ಗಂಟೆಗೆ ಮಹತ್ವದ ಸಭೆ ಕರೆದಿದ್ದಾರೆ.
ಈ ಸಭೆಯಲ್ಲಿ ಕೋವಿಡ್ ಉಸ್ತುವಾರಿ ಸಚಿವರು, ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದು, ಚರ್ಚೆಯ ನಂತರ ಲಾಕ್ಡೌನ್ ಅಥವಾ ಜನತಾ ಕರ್ಫ್ಯೂವನ್ನು ಮುಂದುವರೆಸುವುದಾ? ಎಂಬುದನ್ನು ಸಿಎಂ ತೀರ್ಮಾನಿಸಲಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಲಾಕ್ಡೌನ್ ಒಂದೇ ಪರಿಹಾರ ಎಂದು ತಜ್ಞರು ವರದಿ ನೀಡಿದ್ದಾರೆ. ಹೀಗಾಗಿ ನಾಳೆ ಸಚಿವರ ಹಾಗೂ ಅಧಿಕಾರಿಗಳ ಸಭೆ ಕರೆದಿರುವ ಸಿಎಂ ಜನತಾ ಕರ್ಫ್ಯೂವನ್ನು ಮತ್ತಷ್ಟು ಬಿಗಿಗೊಳಿಸಲಿದ್ದಾರಾ ? ಅಥವಾ 12 ನೇ ತಾರೀಖಿನ ಬಳಿಕ ಲಾಕ್ ಡೌನ್ ಘೋಷಣೆ ಮಾಡಲಿದ್ದಾರಾ ಎಂಬುದನ್ನು ಕಾದು ನೋಡಬೇಕಾಗಿದೆ.