ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಇಂದು 61 ಜನರಿಗೆ ಕೊರೋನಾ ಸೋಂಕು (Corona virus) ದೃಢಪಟ್ಟಿದೆ. ಆ ಮೂಲಕ ಪಾಸಿಟಿವಿಟಿ ರೇಟ್ ಶೇಕಡಾ 1.95 ರಷ್ಟಿದೆ.
ಕಳೆದ 24 ಗಂಟೆಯಲ್ಲಿ 3,123 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದ್ದು, 863 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. 156 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.