Tuesday, July 5, 2022

Latest Posts

ಕೊರೋನಾ ಎಫೆಕ್ಟ್: ಬೆಂಗಳೂರಿನಲ್ಲಿ 8 ಸಾವಿರ ಪಿಜಿಗಳು ಕ್ಲೋಸ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಡೆಡ್ಲಿ ಕೊರೋನಾ ಮಾಡಿದ ಅವಾಂತರ ಅಷ್ಟಿಷ್ಟಲ್ಲ. ಎಷ್ಟೋ ಜನ ಕೆಲಸ ಕಳೆದುಕೊಂಡಿದ್ದಾರೆ. ವ್ಯವಹಾರಗಳೆಲ್ಲಾ ಬಂದ್ ಆಗಿವೆ, ಅಂಗಡಿ ಮುಂಗಟ್ಟುಗಳು ಮುಚ್ಚಿವೆ. ಕೆಲವರು ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ.

ಇನ್ನು ಕೊರೋನಾ ಹಿನ್ನೆಲೆ ಶಾಲಾ, ಕಾಲೇಜು ಬಂದಾಗಿರುವುದರಿಂದ ಬೆಂಗಳೂರಿನಲ್ಲಿ ಪಿಜಿಗಳಿಗೆ ಜನರೇ ಇಲ್ಲದಂತಾಗಿದೆ. 8 ಸಾವಿರಕ್ಕೂ ಅಧಿಕ ಪಿಜಿಗಳು ಬಂದಾಗಿದೆ. ಪಿಜಿಯನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿದ್ದ 30 ಸಾವಿರಕ್ಕೂ ಆಧಿಕ ಮಂದಿ ಉದ್ಯೋಗ ಕಳೆದುಕೊಡು ಪರದಾಡುತ್ತಿದ್ದಾರೆ.

ಬೆಂಗಳೂರಿನ ಪಿಜಿ ಓನರ್ಸ್ ಅಸೋಸಿಯೇಷನ್ ನೀಡಿರುವ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ ಒಟ್ಟು 12 ಸಾವಿರ ಪಿಜಿಗಳಿದ್ದು, ಅವುಗಳಲ್ಲಿ 8 ಸಾವಿರ ಪಿಜಿಗಳು ಬಂದ್ ಆಗಿದೆ.  ಕೇವಲ 4 ಪಿಜಿಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ ಎಂದು ಮಾಹಿತಿ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss