Monday, August 8, 2022

Latest Posts

ರಾಜ್ಯದಲ್ಲಿ ಮತ್ತೆ ಕೊರೋನಾ ಸ್ಫೋಟ: 1,275 ಜನರಲ್ಲಿ ಸೋಂಕು ದೃಢ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಮತ್ತೆ ಕೊರೋನಾ ಸ್ಫೋಟಗೊಂಡಿದೆ. ಇಂದು ರಾಜ್ಯದಲ್ಲಿ ಬರೋಬ್ಬರಿ 1,275 ಜನರಲ್ಲಿ ಸೋಂಕು ದೃಢಪಟ್ಟಿದ್ದು,
ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 9,63,614ಕ್ಕೆ ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಪ್ರಕಟಿಸಿದ ಬುಲೆಟಿನ್ ಪ್ರಕಾರ ಕಳೆದ 24 ಗಂಟೆಯಲ್ಲಿ 1275 ಮಂದಿಗೆ ಸೋಂಕು ಧೃಡವಾಗಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 10,220 ಇದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿಂದು 479 ಮಂದಿ ಗುಣಮುಖರಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 10,220ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಇಂದು 786 ಮಂದಿಗೆ ಸೋಂಕು ತಗುಲಿದ್ದು, , 271 ಮಂದಿ ಗುಣಮುಖರಾಗಿದ್ದಾರೆ. ಕೊರೋನಾ ಸೋಂಕಿಗೆ ಮೂವರು ಬಲಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 4,530ಕ್ಕೆ ತಲುಪಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss