ರಾಜ್ಯದಲ್ಲಿ ಕೊರೋನಾ ಏರಿಕೆ: ಇಂದು ಆರೋಗ್ಯ ಇಲಾಖೆಯಿಂದ ತಾಂತ್ರಿಕ ಸಲಹಾ ಸಮಿತಿ ಜೊತೆ ಮಹತ್ವದ ಸಭೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಮತ್ತೆ ಏರಿಕೆಯಾಗುತ್ತಿದ್ದು, ನಾಲ್ಕನೇ ಅಲೆ ಭೀತಿ ಎದುರಾಗಿದೆ.
ಹೀಗಾಗಿ ಮುಂದಿನ 2-3 ವಾರಗಳು ನಿರ್ಣಾಯಕವಾಗಿದ್ದು, ಕೋವಿಡ್ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಜ್ಞರು ಎಚ್ಚರಿಸಿದ್ದಾರೆ.
ಈ ಹಿನ್ನಲೆ ರಾಜ್ಯ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಆರೋಗ್ಯ ಇಲಾಖೆ, ತಾಂತ್ರಿಕ ಸಲಹಾ ಸಮಿತಿ ಮೊರೆ ಹೋಗಿದ್ದು ಇಂದು ಸಂಜೆ 7 ಗಂಟೆಗೆ ಟಾಸ್ಕ್ ಫೋರ್ಸ್ ಜತೆ ಇಲಾಖೆಯ ಮಹತ್ವದ ಸಭೆ ನಡೆಸಲಿದೆ. ಕೊರೊನಾ ಪ್ರಕರಣ ಹೆಚ್ಚಳ ಸಂಬಂಧ ಚರ್ಚೆ ನಡೆಯಲಿದೆ.
ಮುನ್ನೆಚ್ಚರಿಕಾ ಕ್ರಮಗಳ ಕುರಿತು ತಾಂತ್ರಿಕ ಸಲಹಾ ಸಮಿತಿ ಜತೆ ಸಭೆ ನಡೆಸುವುದಾಗಿ ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್ ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!