ಹೊಸದಿಗಂತ ವರದಿ, ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ (ಮಾ.13) ಮೂವರಿಗೆ ಕೊರೋನಾ ಸೋಂಕು ದೃಢ ಪಟ್ಟಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ. ವಾರದಿಂದೀಚೆ ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು, ಒಂದಂಕೆಯಲ್ಲಿ ಮುಂದುವರಿದಿದೆ.
ಭಾನುವಾರ ಇಬ್ಬರು ಸೋಂಕು ಮುಕ್ತರಾಗಿದ್ದಾರೆ. ಈ ತನಕ ಜಿಲ್ಲೆಯಲ್ಲಿ ಒಟ್ಟು 1,35,448 ಮಂದಿ ಕೋವಿಡ್ ಮುಕ್ತರಾಗಿದ್ದಾರೆ. ಭಾನುವಾರ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,848 ಕೋವಿಡ್ ಸಾವು ಸಂಭವಿಸಿರುವುದಾಗಿ ಆರೋಗ್ಯ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡದಲ್ಲಿ ಸಕ್ರಿಯ ಪ್ರಕರಣಗಳು ಎರಡಂಕೆಗಳಿಗೆ ಇಳಿದಿದೆ. ಭಾನುವಾರ 25 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಪಾಸಿಟಿವಿಟಿ ದರ ಶೇ.0.18ರಲ್ಲಿದೆ.