ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂವರಿಗೆ ಕೊರೋನಾ

ಹೊಸದಿಗಂತ ವರದಿ,ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ (ಮಾ.11) ಮೂವರಿಗೆ ಕೊರೋನಾ ಸೋಂಕು ದೃಢ ಪಟ್ಟಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ. ವಾರದಿಂದೀಚೆ ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು, ಒಂದಂಕೆಯಲ್ಲಿ ಮುಂದುವರಿದಿದೆ.
ಶುಕ್ರವಾರ ಏಳು ಮಂದಿ ಸೋಂಕು ಮುಕ್ತರಾಗಿದ್ದಾರೆ. ಈ ತನಕ ಜಿಲ್ಲೆಯಲ್ಲಿ ಒಟ್ಟು 1,33,573 ಮಂದಿ ಕೋವಿಡ್ ಮುಕ್ತರಾಗಿದ್ದಾರೆ. ಶುಕ್ರವಾರ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,848 ಕೋವಿಡ್ ಸಾವು ಸಂಭವಿಸಿರುವುದಾಗಿ ಆರೋಗ್ಯ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡದಲ್ಲಿ ಸಕ್ರಿಯ ಪ್ರಕರಣಗಳು ಎರಡಂಕೆಗಳಿಗೆ ಇಳಿದಿದೆ. ಶುಕ್ರವಾರ 22 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಪಾಸಿಟಿವಿಟಿ ದರ ಶೇ.0.19ರಲ್ಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!