ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊರೋನಾ ಹೆಚ್ಚಳ: ತುರ್ತು ಅಗತ್ಯವಿದ್ದರೆ ಮಾತ್ರ ಸರ್ಕಾರಿ ಕಚೇರಿಗೆ ಬನ್ನಿ !

ಹೊಸ ದಿಗಂತ ವರದಿ ಮೈಸೂರು:

ಅರಮನೆ ನಗರಿ ಮೈಸೂರಿನಲ್ಲಿ ಮಹಾಮಾರಿ ಕೊರೋನಾ ಸೋಂಕಿನ ಹರಡುವಿಕೆ ಆರ್ಭಟ ಹೆಚ್ಚಾಗುತ್ತಿದ್ದು, ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಇದೀಗ ಸರ್ಕಾರಿ ಕಚೇರಿಗೆ ಸಾರ್ವಜನಿಕರು ವಿನಾಕಾರಣ ಬರುವುದಕ್ಕೆ ಜಿಲ್ಲಾಡಳಿತ ಇದೀಗ ಕಡಿವಾಣ ಹಾಕಿದೆ.

ತುರ್ತು ಅಗತ್ಯವಿದ್ದರೆ ಮಾತ್ರ ಸರ್ಕಾರಿ ಕಚೇರಿಗೆ ಬನ್ನಿ, ಇಲ್ಲದಿದ್ದರೆ ದೂರವೇ ಉಳಿಯಿರಿ ಎಂಬ ಸಂದೇಶವನ್ನು ಜನರಿಗೆ ರವಾನಿದೆ. ಸರ್ಕಾರಿ ಕಚೇರಿಗಳ ಸಿಬ್ಬಂದಿಗೂ ಕೊರೊನಾ ಸೋಂಕು ತಗುಲುತ್ತಿರುವುದು ಆತಂಕ ಮೂಡಿಸಿದೆ. ಹೀಗಾಗಿ ಮೈಸೂರಿನ ಸರ್ಕಾರಿ ಕಚೇರಿಗಳಲ್ಲಿ ಅಗತ್ಯವಿದ್ದವರಿಗಷ್ಟೇ ಪ್ರವೇಶ ಕಲ್ಪಿಸಿ, ಸಣ್ಣಪುಟ್ಟ ವಿಚಾರಗಳಿಗೂ ಬರುತ್ತಿರುವವರನ್ನು ನಿಷೇಧಿಸಲಾಗಿದೆ.
ಮೈಸೂರು ಮಹಾನಗರಪಾಲಿಕೆಯ ಮೇಯರ್ ರುಕ್ಮಿಣಿ ಮಾದೇಗೌಡ ಸೇರಿದಂತೆ ಪಾಲಿಕೆಯ 6 ಸದಸ್ಯರು, 12 ಸಿಬ್ಬಂದಿಗೆ ಪಾಸಿಟಿವ್ ದೃಢವಾಗಿತ್ತು.

ಉಳಿದ ಸಿಬ್ಬಂದಿ ಆತಂಕದಲ್ಲೇ ಕಾರ್ಯ ನಿರ್ವಹಿಸುವಂತಾಗಿದೆ. ಹೀಗಾಗಿ ಜಿಪಂ, ಪಾಲಿಕೆ, ಮುಡಾ, ಜಿಲ್ಲಾಧಿಕಾರಿ ಕಚೇರಿ, ಎಸ್ಪಿ ಕಚೇರಿ, ಲೋಕೋಪಯೋಗಿ, ಸಾರ್ವಜನಿಕ ಶಿಕ್ಷಣ ಇಲಾಖೆ, ತಹಸಿಲ್ದಾರ್ ಕಚೇರಿ, ಉಪ ನೋಂದಣಾಧಿಕಾರಿಗಳ ಕಚೇರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾಡಾ ಕಚೇರಿ, ಸಹಕಾರ ಸಂಘಗಳ ನಿಬಂಧಕರ ಕಚೇರಿ, ನ್ಯಾಯಾಲಯ ಸಂಕೀರ್ಣದಲ್ಲಿ ಕೋವಿಡ್ ಹರಡದಂತೆ ಬಿಗಿ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸುಮ್ಮನೇ ಓಡಾಡುವವರನ್ನು ಒಳಗೆ ಬಿಡದಂತೆ ನೋಡಿಕೊಳ್ಳಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss