spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 27, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಹೆಚ್ಚಳ: ರಾಜ್ಯದಲ್ಲಿ ಇಂದು ನಂಬರ್ ವನ್ ಸ್ಥಾನ!

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………

ಹೊಸದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಲಾಕ್‌ಡೌನ್ ಬಲೆಗೆ ಸಿಲುಕಲಿದೆಯೇ?
ದಿನೇ ದಿನೇ ಹೆಚ್ಚುತ್ತಿರುವ ಕೋವಿಡ್ ಪಾಸಿಟಿವ್ ಪ್ರಕರಣಗಳು ಈ ಪ್ರಶ್ನೆಯನ್ನು ಹುಟ್ಟು ಹಾಕಿದೆ. ಕೇರಳದಲ್ಲಿ ಏರಿಕೆ ಕಾಣುತ್ತಿರುವ ಕೋವಿಡ್ ಪ್ರಕರಣಗಳು ಜಿಲ್ಲೆಯ ಮೇಲೂ ಪರಿಣಾಮ ಬೀರುತ್ತಿವೆ. ಜಿಲ್ಲೆ ಅನ್‌ಲಾಕ್ ಆದ ಸಂದರ್ಭ 200ರ ಗಡಿಯಲ್ಲಿದ್ದ ಕೋವಿಡ್ ಪ್ರಕರಣಗಳು ಈಗ 400 ರ ಗಡಿ ದಾಟಿದೆ. ಭಾನುವಾರ ದ.ಕ. ಜಿಲ್ಲೆಯಲ್ಲಿ 410 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಪಾಸಿಟಿವ್ ಪ್ರಕರಣದಲ್ಲಿ ರಾಜ್ಯದಲ್ಲಿಯೇ ಮೊದಲ ಸ್ಥಾನಕ್ಕೆ ಜಿಲ್ಲೆ ತಲುಪಿದೆ. ಭಾನುವಾರ ಬೆಂಗಳೂರು ನಗರ 409, ಉಡುಪಿ,162ಮತ್ತು ಮೈಸೂರಿನಲ್ಲಿ 146 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಕಳೆದ ಒಂದು ವಾರದಿಂದ ದ.ಕ.ದಲ್ಲಿ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಇದ್ದು, ಆತಂಕಕ್ಕೆ ಕಾರಣವಾಗಿದೆ.
ಜನ ಜಾಗೃತಿಯೇ ಮದ್ದು
ಕೋವಿಡ್ ಪಾಸಿಟಿವ್ ಪ್ರಕರಣಗಳು ಕಡಿಮೆಯಾಗಬೇಕೆಂದರೆ ಜನಜಾಗೃತಿಯೇ ಮದ್ದು. ಜನ ಜಾಗೃತರಾಗದ ಹೊರತು ಬೇರೇನೂ ಮಾಡಲು ಸಾಧ್ಯವಿಲ್ಲ. ಜಿಲ್ಲಾಡಳಿತ ಸತತವಾಗಿ ಕೋವಿಡ್ ನಿಯಮ ಪಾಲಿಸಲು ಸೂಚನೆ ನೀಡುತ್ತಿದ್ದರೂ ಬಹುತೇಕ ಮಂದಿ ನಿರ್ಲಕ್ಷ್ಯ ವಹಿಸುತ್ತಿರುವುದು ಕಂಡುಬರುತ್ತಿದೆ. ಕೋವಿಡ್ ನಿಯಮ ಉಲ್ಲಂಘಿಸಿ ಸಭೆ ಸಮಾರಂಭಗಳು ಕದ್ದು ಮುಚ್ಚಿ ನಡೆಯುತ್ತಲೇ ಇವೆ. ಮಾಸ್ಕ್ ಧರಿಸದೆ ಓಡಾಡುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದು, ಅನವಶ್ಯಕ ಓಡಾಟದಿಂದಾಗಿ ಕೋವಿಡ್ ಹೆಚ್ಚುತ್ತಲೇ ಇದೆ. ಬಸ್‌ಗಳಲ್ಲಿ ಕೂಡ ಮಾಸ್ಕ್ ಧರಿಸದೆ ಪ್ರಯಾಣಿಸುತ್ತಿರುವುದು ಕಂಡುಬರುತ್ತಿದೆ.
410 ಪಾಸಿಟಿವ್ 6 ಮಂದಿ ಸಾವು
ದ.ಕ.ಜಿಲ್ಲೆಯಲ್ಲಿ ಭಾನುವಾರ 410 ಮಂದಿಗೆ ಕೋವಿಡ್ ಸೋಂಕು ತಗುಲಿದೆ. ಇದೇ ವೇಳೆ 6 ಮಂದಿ ಸಾವನ್ನಪ್ಪಿದ್ದು,264 ಮಂದಿ ಗುಣಮುಖರಾಗಿದ್ದಾರೆ. ಸದ್ಯ 2943 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ ಇದುವರೆಗೆ 100780  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 1430 ಮಂದಿ ಸಾವನ್ನಪ್ಪಿದ್ದಾರೆ. 96407 ಮಂದಿ ಗುಣಮುಖರಾಗಿದ್ದಾರೆ.
ಒಟ್ಟು 82,634 ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಕರಣ ದಾಖಲಾಗಿದ್ದು, 1,00,42,417 ರೂ.ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss