spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಜಪಾನ್ ದೇಶದಲ್ಲಿ ಕೊರೋನಾ ಹೆಚ್ಚಳ: ಟೋಕಿಯೋ ಸಹಿತ ಆರು ನಗರಗಳಲ್ಲಿ ತುರ್ತು ಪರಿಸ್ಥಿತಿ ಘೋಷಣೆ!

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಜಪಾನ್ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾದ ಹಿನ್ನಲೆಯಲ್ಲಿ ಜಪಾನ್ ಸರ್ಕಾರ ರಾಜಧಾನಿ ಟೋಕಿಯೋ ಸೇರಿದಂತೆ ಆರು ನಗರಗಳಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ.
ಜಪಾನ್ ನ ಟೋಕಿಯೊ, ಸೈತಮಾ, ಚಿಬಾ, ಕನಗವಾ, ಒಸಾಕಾ ಮತ್ತು ಒಕಿನಾವಾ ಪ್ರಾಂತ್ಯಗಳಿಗೆ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದ್ದು, ನೆರೆಯ ಹೊಕ್ಕೈಡೊ, ಇಶಿಕಾವಾ, ಕ್ಯೋಟೋ, ಹ್ಯೋಗೊ ಮತ್ತು ಫುಕುವೊಕಾ ಪ್ರಾಂತ್ಯಗಳಿಗೆ ರೋಗ ಹರಡುವುದನ್ನು ತಡೆಯುವಂತೆ ಸ್ಥಳೀಯ ಆಡಳಿತಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ.
ಈ ಕುರಿತು ಮಾತನಾಡಿರುವ ಜಪಾನ್ ಪ್ರಧಾನಿ ಯೋಶಿಹಿದೆ ಸುಗಾ ಅವರು, ಕೋವಿಡ್ ಸೋಂಕಿನ ಪ್ರಮಾಣ ಗಣನೀಯವಾಗಿ ಹೆಚ್ಚಳವಾದ ಹಿನ್ನಲೆಯಲ್ಲಿ ಟೋಕಿಯೊ, ಸೈತಮಾ, ಚಿಬಾ, ಕನಗವಾ, ಒಸಾಕಾ ಮತ್ತು ಒಕಿನಾವಾ ಪ್ರಾಂತ್ಯಗಳಿಗೆ ತುರ್ತು ಪರಿಸ್ಥಿತಿ ಹೇರಲು ಮತ್ತು ಆದ್ಯತೆಯ ಕ್ರಮಗಳನ್ನು ಅನ್ವಯಿಸಲು ನಾವು ನಿರ್ಧರಿಸಿದ್ದೇವೆ. ಹೊಕ್ಕೈಡೊ, ಇಶಿಕಾವಾ, ಕ್ಯೋಟೋ, ಹ್ಯೋಗೊ ಮತ್ತು ಫುಕುವೊಕಾ ಪ್ರಾಂತ್ಯಗಳಿಗೆ ರೋಗ ಹರಡುವುದನ್ನು ಕೂಡಲೇ ತಡೆಯಬೇಕಿದೆ ಎಂದು ಹೇಳಿದ್ದಾರೆ.
ಜನರು ಅನಿವಾರ್ಯವಲ್ಲದ, ತುರ್ತು ಅಲ್ಲದ ಕಾರಣಗಳಿಗಾಗಿ ಹೊರಗೆ ಹೋಗುವುದನ್ನು ಅಥವಾ ಪ್ರಯಾಣಿಸುವುದನ್ನು ತಡೆಯಬೇಕು. ಇತರ ಪ್ರಯಾಣದ ಸಮಯದಲ್ಲಿ ತಮ್ಮ ಊರುಗಳಿಗೆ ಹಿಂದಿರುಗುವ ಬಗ್ಗೆ ಸಾಧ್ಯವಾದಷ್ಟು ಎಚ್ಚರಿಕೆಯಿಂದ ಮತ್ತು ಸಂಯಮದಿಂದ ಇರಬೇಕೆಂದು ವಿನಂತಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss