ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊಡಗು ಜಿಲ್ಲೆಯಲ್ಲಿ ಕೊರೋನಾ ಹೆಚ್ಚಳ: ಇನ್ಮುಂದೆ ವಾರದಲ್ಲಿ ಎರಡು ದಿನ ಮಾತ್ರ ವ್ಯಾಪಾರಕ್ಕೆ ಅವಕಾಶ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊಡಗು ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲ್ಲೆ ಹಿನ್ನೆಲೆ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದೆ.
ಇನ್ಮುಂದೆ ವಾರದಲ್ಲಿ ಮಂಗಳವಾರ ಮತ್ತು ಶುಕ್ರವಾರ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಲಾಗುವುದು . ಉಳಿದ ದಿನ ಎಲ್ಲಾ ಅಂಗಡಿಗಳು ಸಂಪೂರ್ಣ ಬಂದ್ ಆಗಲಿವೆ ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮಂಗಳವಾರ ಮತ್ತು ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ 12 ಗಂಟೆಯವರೆಗೆ ದಿನಸಿ, ಹಣ್ಣು, ತರಕಾರಿ, ಮಾಂಸ, ಮದ್ಯದಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.
ಆದರೆ ಔಷಧಿ ಅಂಗಡಿ, ಪೆಟ್ರೋಲ್ ಬಂಕ್‌ಗಳಿಗೆ ಬಂದ್ ಅನ್ವಯಿಸುವುದಿಲ್ಲವೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಇನ್ನು ಹಾಲು, ಹಾಲಿನ ಉತ್ಪನ್ನಗಳು ಮತ್ತು ಪತ್ರಿಕೆ ವಿತರಣೆಗೆ ಪ್ರತಿದಿನ ಬೆಳಗ್ಗೆ 6 ರಿಂದ 10 ಗಂಟೆವರೆಗೆ ವಿನಾಯಿತಿ ನೀಡಲಾಗಿದೆ.
ಬೆಂಗಳೂರು, ಮೈಸೂರು, ಕೇರಳ ಭಾಗದಿಂದ ಬಂದವರಿಂದ ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಗ್ರಾ.ಪಂ ವ್ಯಾಪ್ತಿಯಲ್ಲಿ ರಚಿಸಿರುವ ಕಾರ್ಯಪಡೆಗಳು ಹೊರಗಿನಿಂದ ಬಂದವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ. ಆದ್ದರಿಂದ ಹೊರ ರಾಜ್ಯ, ಜಿಲ್ಲೆಯಿಂದ ಬಂದವರು ಮನೆಯಲ್ಲೇ ಇರುವ ಮೂಲಕ ಸೋಂಕು ವ್ಯಾಪಿಸುವುದನ್ನು ತಡೆಯಲು ಸಹಕರಿಸಬೇಕೆಂದು ಮನವಿ ಮಾಡಿದರು.
ಆಕ್ಸಿಜನ್ ಕೊರತೆ ಇಲ್ಲ
ಕೊಡಗು ಜಿಲ್ಲೆಯಲ್ಲಿ ಸದ್ಯಕ್ಕೆ ಆಕ್ಸಿಜನ್ ಕೊರತೆ ಇಲ್ಲ, ಆದರೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇರುವುದರಿಂದ ಮತ್ತಷ್ಟು ಆಕ್ಸಿಜನ್ ಅನ್ನು ಮೈಸೂರಿನಿಂದ ತರಿಸಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಸೋಮವಾರಪೇಟೆಯಲ್ಲೂ 50 ಆಕ್ಸಿಜನ್ ಬೆಡ್ ಗಳ ಕೋವಿಡ್ ಆಸ್ಪತ್ರೆ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ತಿಳಿಸಿದರು. ಇದೇ ವೇಳೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಮೋಹನ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತಿರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss