ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………….
ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂತ್ರಾಲಯ ಮಠದಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ. ಈ ಬಗ್ಗೆ ಶುಕ್ರವಾರ ಶ್ರೀರಾಘವೇಂದ್ರಸ್ವಾಮಿ ಮಠದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ.
ಮಂತ್ರಾಲಯ ಮಠದಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ, ಮೇ 1 ರಿಂದ ಪ್ರತ್ಯಕ್ಷದರ್ಶನ ,ತೀರ್ಥಪ್ರಸಾದ ವ್ಯವಸ್ಥೆಯಿರುವುದಿಲ್ಲ. ಭಕ್ತರು ಆನ್ಲೈನ್ ಮೂಲಕ ಸೇವೆಯಲ್ಲಿ ಪಾಲ್ಗೊಳ್ಳಬಹುದು ಎಂದು ಪ್ರಕಟಣೆ ಹೊರಡಿಸಿದೆ.