ರಾಷ್ಟ್ರ ರಾಜಧಾನಿಯಲ್ಲಿ ಕೊರೋನಾ ಹೆಚ್ಚಳ: ವೀಕೆಂಡ್​ ಕರ್ಫ್ಯೂ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ಅಪ್ ಸರ್ಕಾರ ವೀಕೆಂಡ್​ ಕರ್ಫ್ಯೂ ಘೋಷಿಸಿದೆ. ಈ ಮೂಲಕ ವಾರಾಂತ್ಯದ ಎರಡು ದಿನಗಳು ಎಲ್ಲ ಚಟುವಟಿಕೆಗಳ ಮೇಲೆ ನಿರ್ಬಂಧ ವಿಧಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಆರೋಗ್ಯ ಸಚಿವ ಸತ್ಯೇಂದ್ರ ಜೈನ್,ದೆಹಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದೆ. ಪಾಸಿಟಿವಿಟಿ ದರ 8.5ಕ್ಕೆ ಏರಿಕೆಯಾಗಿದೆ. ಹೀಗಾಗಿ ರಾಜ್ಯದಲ್ಲಿ ಲಾಕ್​ಡೌನ್​ ಬದಲಾಗಿ ವೀಕೆಂಡ್​ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದರು.
ದೆಹಲಿ ಕೊರೋನಾ ಜೊತೆಯಲ್ಲಿ ಒಮಿಕ್ರಾನ್​ ಪ್ರಕರಣಗಳೂ ಹೆಚ್ಚಾಗಿ ಪತ್ತೆಯಾಗುತ್ತಿದ್ದು, ತಜ್ಞರು ಕೂಡ ಎಚ್ಚರಿಕೆ ವಹಿಸಲು ಸೂಚಿಸಿದ್ದಾರೆ. ಈ ಹಿನ್ನೆಲೆ ಜನರ ಸುರಕ್ಷತೆಗೆ ವಾರಾಂತ್ಯದ ಎರಡು ದಿನ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!