ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 48 ಮಂದಿಗೆ ಕೊರೋನಾ

ಹೊಸದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಶುಕ್ರವಾರ 48 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 40 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 135 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಸಾವು ಸಂಭವಿಸಲಿಲ್ಲ.
ಕೇರಳದಲ್ಲಿ 3581 ಹೊಸ ಪ್ರಕರಣ

ಕೇರಳದಲ್ಲಿ ಶುಕ್ರವಾರ ಹೊಸದಾಗಿ 3581 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 3415 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 7837 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 6 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಶುಕ್ರವಾರ ಶೇಕಡಾ 8.12 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!