ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತು ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಸುತ್ತೋಲೆ ಹೊರಡಿಸಿದೆ.
ಜನರು ಆತಂಕ ಪಡಬಾರದು, ಜಾಗರೂಕರಾಗಿ ಇರಬೇಕು. ವಿದೇಶದಿಂದ ಬರುವ ಪ್ರಯಾಣಿಕರ ಮಾಹಿತಿಯನ್ನ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿ ಎಂದು ಆರೋಗ್ಯ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದೆ.
ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ನೀಡಿದ ಪ್ರಮುಖ ಸಲಹೆಗಳು:
ಜಾಗರೂಕರಾಗಿರಿ, ಆತಂಕಪಡಬೇಡಿ: ಅಧಿಕೃತ ಮೂಲಗಳ ಮೂಲಕ ಮಾಹಿತಿ ಪಡೆಯಿರಿ, ಪರಿಶೀಲಿಸದ ಮಾಹಿತಿಯನ್ನು ಪರಿಗಣಿಸದಿರಿ.
ಆರೋಗ್ಯ ಸಿಬ್ಬಂದಿಯೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳಿ: ವಿದೇಶಗಳಿಂದ ಬರುವ ಪ್ರಯಾಣಿಕರ ಬಗ್ಗೆ ಆರೋಗ್ಯ ಅಧಿಕಾರಿಗಳಿಗೆ ತಿಳಿಸಬೇಕು.
ಜನದಟ್ಟಣೆಯ ಸ್ಥಳಗಳಲ್ಲಿ mask ಧರಿಸಿ, ದೈಹಿಕ ಅಂತರವನ್ನು ಕಾಪಾಡಿಕೊಳ್ಳಿ, ಉತ್ತಮ ನೈರ್ಮಲ್ಯವನ್ನು ಅಭ್ಯಾಸ ಮಾಡಬೇಕು
ಜ್ವರ, ಕೆಮ್ಮು, ಎದೆನೋವು ಅಥವಾ ಉಸಿರಾಟದ ತೊಂದರೆ ಅನುಭವಿಸಿದರೆ ತಕ್ಷಣ ವೈದ್ಯಕೀಯ ಸಲಹೆ ಪಡೆಯಿರಿ.
Random ಮಾದರಿಗಳ ಪರೀಕ್ಷೆಗೆ ಸಹಕರಿಸಿ ಮತ್ತು ಕಣಾವಲುಗಾಗಿ ಮಾದರಿ ಸಂಗ್ರಹವನ್ನು ಅನುಮತಿಸಿ.
IHIP ಪೋರ್ಟಲ್ನ ಸಮುದಾಯ ಮೇಲ್ವಿಚಾರಣಾ ಉಪಕರಣದ ಮೂಲಕ COVID-19 ತರಹದ ರೋಗಲಕ್ಷಣಗಳಲ್ಲಿ ಅಸಾಮಾನ್ಯ ಹೆಚ್ಚಳವನ್ನು ವರದಿ ಮಾಡಿ.
ಅನಾರೋಗ್ಯ ಪೀಡಿತ ಮಕ್ಕಳನ್ನು ಮನೆಯಲ್ಲಿಯೇ ಇರಿಸಿ, ರೋಗಲಕ್ಷಣಗಳಿಗಾಗಿ ವಿದ್ಯಾರ್ಥಿಗಳನ್ನು ಮೇಲ್ವಿಚಾರಣೆ ಮಾಡಿ, ನೈರ್ಮಲ್ಯವನ್ನು ಉತ್ತೇಜಿಸಿ, ಸರಿಯಾದ ಗಾಳಿಯನ್ನು ಖಚಿತಪಡಿಸಿಕೊಳ್ಳಿ.
ನೈರ್ಮಲ್ಯ ಮತ್ತು ಪರಿಸರ ಜಾಗೃತಿ: ಉತ್ತಮ ನೈರ್ಮಲ್ಯವನ್ನು ಅಭ್ಯಾಸ ಮಾಡಿ, ತ್ಯಾಜ್ಯವನ್ನು ಸರಿಯಾಗಿ ವಿಲೇವಾರಿ ಮಾಡಿ, ಸಾರ್ವಜನಿಕ ಪ್ರದೇಶಗಳನ್ನು ಸ್ಪಚ್ಛವಾಗಿಡಿ.
ಸಾಮಾನ್ಯ ಜೀವನವನ್ನು ನಡೆಸಿ ಆದರೆ ಸಲಹೆಗಳನ್ನು ಅನುಸರಿಸಿ.
ಆರೋಗ್ಯ ಸಲಹೆಗಾಗಿ ಉಚಿತ ಸಹಾಯವಾಣಿ ಸಂಖ್ಯೆ 1800 425 8330 ಗೆ ಕರೆ ಮಾಡಿ ಹಾಗೂ ರೋಗಿಗಳ ತುರ್ತು ಸಾಗಣೆಗೆ 108 ಗೆ ಕರೆ ಮಾಡಿ.