ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕೊರೋನಾ ಹೊಸ ತಳಿ ಜೆಎನ್1 ಹಾವಳಿ ಹೆಚ್ಚಾಗಿದ್ದು, ಜನವರಿ 2 ರಿಂದ ರಾಜ್ಯದಲ್ಲಿ ಮತ್ತೆ ಕೋವಿಡ್ ವ್ಯಾಕ್ಸಿನ್ ಅಭಿಯಾನ ಆರಂಭವಾಗಲಿದೆ.
ರಾಜ್ಯಾದ್ಯಂತ ಉಚಿತ ಕೋರ್ಬಿವ್ಯಾಕ್ಸ್ ಲಸಿಕೆ ನೀಡಲು ಸರ್ಕಾರ ನಿರ್ಧಾರ ಮಾಡಿದ್ದು, ಆರೋಗ್ಯ ಇಲಾಖೆ ವ್ಯಾಕ್ಸಿನ್ ಮೊರೆ ಹೋಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಮತ್ತೆ ವ್ಯಾಕ್ಸಿನ್ ಡ್ರೈವ್ ಆರಂಭವಾಗಲಿದೆ.
ಈಗಾಗಲೇ ರಾಜ್ಯದ ಜನರು ಮೊದಲನೇ ಹಾಗೂ ಎರಡನೇ ಡೋಸ್ ವ್ಯಾಕ್ಸಿನ್ ಪಡೆದಿದ್ದಾರೆ. ಮುನ್ನೆಚ್ಚರಿಕಾ ವ್ಯಾಕ್ಸಿನ್ ಮಾತ್ರ ಶೇ.27ರಷ್ಟು ಮಂದಿ ಮಾತ್ರ ಪಡೆದಿದ್ದಾರೆ.1.5 ಕೋಟಿಗೂ ಹೆಚ್ಚು ಜನ ಮೂರನೇ ಡೋಸ್ ವ್ಯಾಕ್ಸಿನ್ ಪಡೆದಿಲ್ಲ. ಪ್ರಾಥಮಿಕ ಹಂತದಲ್ಲಿ 30 ಸಾವಿರ ಕೋರ್ಬಿವ್ಯಾಕ್ಸ್ ಲಸಿಕೆ ಖರೀದಿಗೆ ಸರ್ಕಾರ ಮುಂದಾಗಿದೆ.