Wednesday, August 10, 2022

Latest Posts

ಆಸ್ಪತ್ರೆಯ ಶೌಚಾಲಯದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕೊರೋನಾ ಸೋಂಕಿತ!

ಹೊಸ ದಿಗಂತ ವರದಿ, ಮೈಸೂರು:

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೋನಾ ಸೋಂಕಿತನೊಬ್ಬ ಆಕ್ಸಿಜನ್ ಒದಗಿಸುವ ಪೈಪ್‌ನಿಂದಲೇ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಕೆ.ಆರ್.ಎಸ್ ರಸ್ತೆಯಲ್ಲಿರುವ ಟ್ರಾಮ ಕೇರ್ ಸೆಂಟರ್‌ನಲ್ಲಿ ಭಾನುವಾರ ನಡೆದಿದೆ.
ಮೈಸೂರಿನ ಅಜೀಜ್ ಸೇಠ್ ನಗರದ ನಿವಾಸಿ ದೇವರಾಜು ಆತ್ಮಹತ್ಯೆ ಮಾಡಿಕೊಂಡವರು. ಇವರು ಎರಡು ದಿನಗಳ ಹಿಂದೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಆಕ್ಸಿಜನ್ ಪಡೆಯುತ್ತಿದ್ದ ವ್ಯಕ್ತಿ ಶೌಚಾಲಯಕ್ಕೆ ತೆರಳಿ ಆಕ್ಸಿಜನ್ ವೈರ್‌ನಿಂದ ನೇಣು ಬಿಗಿದುಕೊಂಡಿದ್ದಾರೆ. ಕೊರೋನಾ ಸೋಂಕಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರಬೇಕೆoದು ಶಂಕಿಸಲಾಗಿದೆ.
ಈ ಸಂಬoಧ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss