ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………….
ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಇಂದು ದಾಖಲೆ ಪ್ರಮಾಣದಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಕಳೆದ 24 ಗಂಟೆಯಲ್ಲಿ 48,296 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದ 217 ಜನರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 15,523 ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಒಟ್ಟು ಸೋಂಕಿತರ ಸಂಖ್ಯೆ 1523142ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 14884 ಸೇರಿದಂತೆ ಇದುವರೆಗೆ 1124909 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 382690 ಸಕ್ರೀಯ ಸೋಂಕಿತರಿದ್ದಾರೆ ಎಂಬುದಾಗಿ ತಿಳಿಸಿದೆ.