Saturday, July 2, 2022

Latest Posts

ಹೈದರಾಬಾದ್ ತಂಡದ ಸ್ಟಾರ್ ಆಟಗಾರನಿಗೂ ಕೊರೋನಾ ಪಾಸಿಟಿವ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………….

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾದಿಂದ ಐಪಿಎಲ್ ರದ್ದುಗೊಂಡಿದ್ದು, ಆಟಗಾರಿಗೆ ಈಗ ಸೋಂಕಿನ ಆತಂಕ ಶುರುವಾಗಿದೆ. ಇದೀಗ ಸನ್‌ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ಆಟಗಾರ ವೃದ್ಧಿಮಾನ್ ಸಹಾಗೆ ಕೊರೋನಾ ಸೋಂಕು ತಗುಲಿದೆ ಎಂದು ಎಸ್​​ಆರ್​ಹೆಚ್​ ತಂಡದ ಮ್ಯಾನೇಜ್‌ಮೆಂಟ್​ ತಿಳಿಸಿದೆ.
ನಿನ್ನೆ ಅಷ್ಟೇ ಕೋಲ್ಕತಾ ನೈಟ್ ರೈಡರ್ಸ್ ತಂಡದ ವರುಣ್​ ಚಕ್ರವರ್ತಿ ಹಾಗೂ ಸಂದೀಪ್ ವಾರಿಯರ್​ಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಚೆನ್ನೈ ಸೂಪರ್‌ ಕಿಂಗ್ಸ್ ತಂಡದ ಸಿಇಓ ಕೆ.ವಿಶ್ವನಾಥನ್‌, ಬೌಲಿಂಗ್‌ ಕೋಚ್‌ ಲಕ್ಷ್ಮಿಪತಿ ಬಾಲಾಜಿ ಹಾಗೂ ಬಸ್‌ ಕ್ಲೀನರ್‌ ಸೇರಿ ಮೂರು ಮಂದಿಗೆ ಸೋಂಕು ತಗುಲಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss