Friday, December 8, 2023

Latest Posts

ರಾಜ್ಯದಲ್ಲಿ ಮತ್ತೆ ಹೆಚ್ಚುತ್ತಿದೆ ಕೊರೋನಾ: ಇಂದು 78 ಮಂದಿಗೆ ಪಾಸಿಟಿವ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೇಶದಲ್ಲಿ ಮತ್ತೆ ಕೊರೋನಾ ಪ್ರಮಾಣ ಹೆಚ್ಚುತ್ತಿದ್ದು, ಕರ್ನಾಟಕದಲ್ಲಿಯೂ ಸಂಖ್ಯೆ ಏರಿಕೆಯಾಗುತ್ತಿವೆ. ಇಂದು 78 ಮಂದಿಗೆ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಅಲ್ಲದೇ ಕಿಲ್ಲರ್ ಕೊರೋನಾಗೆ ಓರ್ವ ಸೋಂಕಿತ ಸಾವನ್ನಪ್ಪಿದ್ದಾರೆ.

ರಾಜ್ಯ ಆರೋಗ್ಯ ಇಲಾಖೆ ( Karnataka Health Department )ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಬಳ್ಳಾರಿ, ಕೋಲಾರ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಮೂವರಿಗೆ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಹಾಸನ, ಹಾವೇರಿ, ಕೊಪ್ಪಳ, ರಾಮನಗರ ಹಾಗೂ ವಿಜಯಪುರದಲ್ಲಿ ತಲಾ ಒಬ್ಬರಿಗೆ ದೃಢಪಟ್ಟಿದ್ದು, ಶಿವಮೊಗ್ಗ 07, ರಾಯಚೂರು 02, ಮೈಸೂರು 11, ಧಾರವಾಡ ಮತ್ತು ಬೀದರ್ ಇಬ್ಬರು ಬೆಂಗಳೂರು ನಗರ 35 ಸೇರಿದಂತೆ 78 ಮಂದಿಗೆ ಕೋವಿಡ್ ಪಾಸಿಟಿವ್ ( Covid19 Positive ) ಎಂಬುದಾಗಿ ದೃಢಪಟ್ಟಿದೆ.

ಇಂದು ಕೋವಿಡ್ ನಿಂದ ಓರ್ವ ಸೋಂಕಿತ ಸಾವನ್ನಪ್ಪಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!