ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………
ಹೊಸದಿಗಂತ ವರದಿ,ಮೈಸೂರು:
ಕೊರೋನಾ ಮೂರನೇ ಅಲೆ ಬಂದರೂ ಅದನ್ನು ಎದುರಿಸಲು ಸಿದ್ಧರಾಗಿದ್ದೇವೆ ಎಂದು ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ತಿಳಿಸಿದರು.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ 3ನೇ ಅಲೆಯನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರ ಸಭೆಯನ್ನು ನಡೆಸಿ, ಚರ್ಚೆ ಮಾಡಲಾಗಿದೆ. ಅಲ್ಲದೆ ನಗರದಲ್ಲಿರುವ ನಿವೃತ್ತ ವೈದ್ಯರು, ಪ್ರಮುಖ ಆಸ್ಪತ್ರೆಗಳ ಸರ್ಜನ್ಗಳ ಸಭೆ ಮಾಡಿ, ಕೊರೋನಾ ಮೂರನೇ ಅಲೆಯನ್ನು ಎದುರಿಸಲು ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು, ಮುನ್ನೇಚ್ಚರಿಕೆವಹಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.
ಈಗ ಮೈಸೂರಿನ ಆಸ್ಪತ್ರೆಗೆ 30 ಮಂದಿ ಹೊಸ ವೈದ್ಯರನ್ನು ನೇಮಕ ಮಾಡಲಾಗಿದೆ. ಕೊರೋನಾ 3ನೇ ಅಲೆ ಎದುರಿಸುವ ಸಂಬoಧ ತರಬೇತಿ ನಡೆಯುತ್ತಿದೆ. ಸರ್ಕಾರದ ಆದೇಶದಂತೆ ಸೋಂಕಿತರಿಗೆ ಚಿಕಿತ್ಸೆ ನೀಡಲು ಸಿದ್ಧರಿದ್ದೇವೆ. ಕೊರೋನಾ 3ನೇ ಅಲೆ ಮಕ್ಕಳನ್ನು ಹೆಚ್ಚು ಭಾದಿಸಲಿದೆ ಎಂಬ ಮಾಹಿತಿಯ ಹಿನ್ನಲೆಯಲ್ಲಿ ಮಕ್ಕಳ ತಜ್ಞರ ಸಭೆಯನ್ನು ನಡೆಸಿದ್ದೇವೆ. ಸದ್ಯ ಮೈಸೂರಿನಲ್ಲಿ ಒಟ್ಟು 260 ಸೋಂಕಿನ ಪ್ರಕರಣಗಳಿವೆ. ಮೈಸೂರು ಸುರಕ್ಷಿತ ವಲಯದಲ್ಲಿದೆ. ಆದರೆ ಕೇರಳದಲ್ಲಿ ಸೋಂಕು ಹೆಚ್ಚಾಗುತ್ತಿರುವುದು ಆತಂಕವುoಟಾಗುತ್ತಿದೆ. ಮುಂಬೈ ಹಾಗೂ ಕೇರಳದಲ್ಲಿ ಯಾವಾಗ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತದೆಯೋ, ಅದರ ಪರಿಣಾಮವೆಲ್ಲಾ ಕರ್ನಾಟಕದಲ್ಲಿ ಆಗುತ್ತಿರುತ್ತದೆ. ಹಾಗಾಗಿ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಕೊರೋನಾ ಸೋಂಕು ಹೆಚ್ಚಾಗಿ ಹರಡದಂತೆ ತಡೆಯಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ. ಸೋಂಕಿತರಿಗೆ ಚಿಕಿತ್ಸೆ ನೀಡಲು ವೈದ್ಯರ ತಂಡವು ಸಿದ್ದವಿದೆ. ಹಾಗಾಗಿ ಕೊರೋನಾ 3ನೇ ಅಲೆಯನ್ನು ತಡೆಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.