ರಾಜ್ಯದಲ್ಲಿ ಇಂದು ಕೊರೋನಾ ಮತ್ತಷ್ಟು ಉಲ್ಬಣ: 4,246 ಜನರಿಗೆ ಪಾಸಿಟಿವ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯದಲ್ಲಿ ಇಂದು ಕೊರೋನಾ ಉಲ್ಬಣಗೊಂಡಿದ್ದು, ನಿನ್ನೆಕ್ಕಿಂತ ಡಬಲ್ ಆಗಿದೆ. ಕಳೆದ 24 ಗಂಟೆಯಲ್ಲಿ 4,246 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಈ ಕುರಿತಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 1,27,328 ಜನರಿಗೆ ಕೊರೋನಾ ಪರೀಕ್ಷೆ ಮಾಡಿಸಲಾಗಿದೆ.ಇವರಲ್ಲಿ ಬೆಂಗಳೂರಿನಲ್ಲಿ 3,605 ಸಹಿತ ರಾಜ್ಯದಲ್ಲಿ 4246 ಜನರಿಗೆ ಪಾಸಿಟಿವ್ ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
ಪಾಸಿಟಿವಿಟಿ ದರ ಶೇ.3.33ರಷ್ಟು ಏರಿಕೆಯಾಗಿದೆ. ಇಬ್ಬರು ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಇದುವರೆಗೆ 226 ಜನರಿಗೆ ಒಮಿಕ್ರಾನ್ ದೃಢಪಟ್ಟಿರೋದಾಗಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!