Sunday, August 14, 2022

Latest Posts

ಕೇರಳ-ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಸರಕು ವಾಹನಗಳ ಚಾಲಕರಿಗೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ , ಕರ್ನಾಟಕಕ್ಕೆ ಬರುವ ಸರಕು ಸಾಗಣೆ ವಾಹನಗಳ ಚಾಲಕರು ಹಾಗೂ ಸಹಾಯಕರು ಕಡ್ಡಾಯವಾಗಿ ಆರ್‌ಟಿಪಿಸಿಆರ್ ಪರೀಕ್ಷೆಯ ವರದಿಯನ್ನು ಹೊಂದಿರಲೇಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದ ಬರುವ ಸಗತ್ಯ ವಸ್ತುಗಳ ಸರಕು ಸಾಗಣೆಯ ವಾಹನಗಳ ಚಾಲಕರು ಹಾಗೂ ಸಹಾಯಕರು 15 ದಿನಗಳಿಗೊಮ್ಮೆ ಆರ್‌ಟಿ ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು.
ಪರೀಕ್ಷಾ ವರದಿಯನ್ನು ಹೊಂದುವುದು ಕಡ್ಡಾಯವಾಗಿದೆ. ಸದರಿ ಪರೀಕ್ಷೆ ವರದಿಗಳನ್ನು ಹೊಂದಿದವರನ್ನು ಮಾತ್ರವೇ ರಾಜ್ಯಕ್ಕೆ ಪ್ರವೇಶಿಸಲು ಅವಕಾಶ ಮಾಡಿಕೊಡಲಾಗುತ್ತದೆ. ಇನ್ನುಳಿದಂತೆ, ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಕೊರೋನಾ ಕುರಿತು ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವುದೂ ಕೂಡ ಕಡ್ಡಾಯವಾಗಿರಲಿದೆ.
ಭಾರತದಲ್ಲಿ ಮತ್ತೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ದಿನೇ ದಿನೇ ಸಾವಿರಾರು ಪ್ರಕರಣಗಳು ಹೆಚ್ಚುತ್ತಿವೆ. ಇತ್ತ ಕೊರೋನಾ ಲಸಿಕೆ ಅಭಿಯಾನವು ಕೂಡ ಪ್ರಗತಿಯಿಂದ ಸಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss