ಕರ್ನಾಟಕದಲ್ಲಿ ಮತ್ತೆ ಏರಿಕೆಯಾದ ಕೊರೋನಾ: 100 ರ ಗಡಿ ದಾಟಿದ ಸೋಂಕಿತರ ಸಂಖ್ಯೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇಂದು ಹೊಸದಾಗಿ 24 ಜನರಿಗೆ ಕೊರೊನಾ ಸೋಂಕು ಕಂಡುಬಂದಿದೆ. ಅದರಲ್ಲಿ ಬೆಂಗಳೂರು ನಗರದಲ್ಲೇ ಹೊಸದಾಗಿ 23 ಜನರಲ್ಲಿ ಸೋಂಕು ಕಾಣಿಸಿಕೊಂಡರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬರಿಗೆ ಕೊರೋನಾ ಸೋಂಕು ಹರಡಿದೆ.

ಇನ್ನು ರಾಜ್ಯದಲ್ಲಿ ಇಂದು 11 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸಕ್ರಿಯ ಕೇಸ್‌ಗಳ ಸಂಖ್ಯೆ 105ಕ್ಕೆ ಏರಿಕೆಯಾಗಿದ್ದು, 85 ಜನರು ಹೋಂ ಐಸೋಲೇಷನ್‌ನಲ್ಲಿದ್ದಾರೆ. ಇನ್ನುಳಿದಂತೆ 20 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನಲೆ ರಾಜ್ಯದಲ್ಲಿ ಶೇಕಡಾ 1.6 ರಷ್ಟು ಕೊರೊನಾ ಪಾಸಿಟಿವಿಟಿ ದರ ಏರಿಕೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!