ಜಪಾನ್ ನಲ್ಲಿ ಕೊರೋನಾ ಉಲ್ಬಣ: ಒಂದೇ ದಿನ ಬರೋಬ್ಬರಿ 456 ಜನರು ಬಲಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಚೀನಾ ಸಹಿತ ವಿದೇಶಗಳಲ್ಲಿ ಕೊರೋನಾ ಸೋಂಕಿನ ಪ್ರಮಾಣ ದಿನೇ ದಿನೇ ಅಧಿಕವಾಗುತ್ತಿದ್ದು, ಇದರ ಜೊತೆಗೆ ಸಾವಿನ ಪ್ರಮಾಣವು ಹೆಚ್ಚುತ್ತಿದೆ.

ಈಗಾಗಲೇ ಚೀನಾದಲ್ಲಿ ನಿತ್ಯವು ಸಾವಿರಾರು ಜನರು ಸಾವನ್ನಪ್ಪಿದ್ದು, ಇದೀಗ ಜಪಾನಿನಲ್ಲೂ ಒಂದು ದಿನದಲ್ಲಿ 456 ಕೋವಿಡ್ ಸಾವುಗಳು ಸಂಭವಿಸಿವೆ ಎಂದು ವರದಿಯಾಗಿದೆ.

ದೇಶದಲ್ಲಿ ಕೇವಲ ಒಂದು ತಿಂಗಳ ಅವಧಿಯಲ್ಲಿ ಸಾವಿರಾರು ಜನರನ್ನು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಜಪಾನ್‌ನಲ್ಲಿ ಕಳೆದ ಮೂರು ತಿಂಗಳುಗಳಲ್ಲಿ ಕೋವಿಡ್ -19 ನಿಂದ ಸಾವನ್ನಪ್ಪುವವರ ಸಂಖ್ಯೆ ಕಳೆದ ವರ್ಷ ಇದೇ ಅವಧಿಗೆ ಹೋಲಿಸಿದರೆ ಸುಮಾರು 16 ಪಟ್ಟು ಹೆಚ್ಚಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!