ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಕೊರೋನಾ ಸೋಂಕಿನ ಪ್ರಕರಣ ಹೆಚ್ಚುತ್ತಿದ್ದು,ಳೆದ 24 ಗಂಟೆಲ್ಲಿ 5 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣ ಭಾರತದಲ್ಲಿ ದಾಖಲಾಗಿದೆ.
ಈಗಾಗಲೇ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಆದರೆ ಕೈಮೀರದಂತೆ ಎಚ್ಚರ ವಹಿಸಲು ಮಾರ್ಚ್ ತಿಂಗಳಲ್ಲಿ ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆ ನಡೆಸಿದ್ದರು. ಇದೀಗ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕಾರಣ ಕೇಂದ್ರ ಆರೋಗ್ಯ ಸಚಿವ ಮಾನ್ಸುಕ್ ಮಾಂಡವಿಯಾ ತುರ್ತು ಸಭೆ ಕರೆದಿದ್ದಾರೆ.
ಏಪ್ರಿಲ್ 7 ರಂದು ಎಲ್ಲಾ ರಾಜ್ಯಹಾಗೂ ಕೇಂದ್ರಾಡಳಿತ ಪ್ರದೇಶದ ಆರೋಗ್ಯ ಸಚಿವರ ಜೊತೆ ತುರ್ತು ಸಭೆ ನಡೆಸಲಿದ್ದಾರೆ. ಕೋವಿಡ್ ಪರಿಸ್ಥಿತಿ ಎದುರಿಸಲು ಹಾಗೂ ನಿಯಂತ್ರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಚನೆ ನೀಡಲಿದ್ದಾರೆ.
ವರ್ಚುವಲ್ ವಿಡಿಯೋ ಕಾನ್ಫೆರೆನ್ಸ್ ಮೂಲಕ ನಾಳೆ ಸಭೆ ನಡೆಯಲಿದೆ. ಆರೋಗ್ಯ ಸಚಿವರು, ನೀತಿ ಆಯೋಗ ಸದಸ್ಯರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕೆಲ ರಾಜ್ಯಗಳು ಹಾಗೂ ನಗರಗಳಲ್ಲಿ ಕೋವಿಡ್ ಗಣನೀಯ ಏರಿಕೆ ಕಾಣುತ್ತಿದೆ. ಭಾರತದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಯಾವುದೇ ಆತಂಕವಿಲ್ಲ ಎಂದು ತಜ್ಞ ವೈದ್ಯರು ಹೇಳಿದ್ದಾರೆ. ಮೈಲ್ಡ್ ಸಿಂಪ್ಟಸ್ ಕಾಣಿಸಿಕೊಳ್ಳುತ್ತಿದೆ. ಆಸ್ಪತ್ರೆ ದಾಖಲಾಗುವ ಸಂಖ್ಯೆ ಕಡಿಮೆ ಇದೆ. ಹೀಗಾಗಿ ಯಾರೂ ಆತಂಕಪಡಬೇಕಿಲ್ಲ ಎಂದಿದ್ದಾರೆ.
195 ದಿನಗಳ ಬಳಿಕ ಭಾರತದಲ್ಲಿ 5,335 ಕೋವಿಡ್ ಪ್ರಕರಣ ದಾಖಲಾಗಿದೆ. ಕಳೆದ ವರ್ಷ ಸೆಪ್ಟೆಂಬರ್ 23 ರಂದು 5,383 ಪ್ರಕರಣ ದಾಖಲಾಗಿತ್ತು. ಬಳಿಕ ಪ್ರತಿ ದಿನ ಇಳಿಕೆಯತ್ತ ಸಾಗಿತ್ತು. ಕಳೆದ 24 ಗಂಟೆಯಲ್ಲಿ ಕರ್ನಾಟಕದಲ್ಲಿ ಇಬ್ಬರು ಕೋವಿಡ್‌ಗೆ ಬಲಿಯಾಗಿದ್ದಾರೆ.