ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ಪ್ರಮಾಣ ಹೆಚ್ಚಿರುವ ನಗರಗಳಲ್ಲಿನ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಮಾರ್ಚ್ 15ರಿಂದ ಎರಡು ವಾರಗಳವರೆಗೆ ಮುಚ್ಚಲಾಗುವುದು ಎಂದು ಪಾಕಿಸ್ತಾನ ತಿಳಿಸಿದೆ.
ರ ಶಿಕ್ಷಣ ಸಚಿವ ಶಫ್ಕತ್ ಮಹಮೂದ್ , ಶಿಕ್ಷಣ ಸಂಸ್ಥೆಗಳಲ್ಲಿಕೊರೋನಾ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಫೈಸಲಾಬಾದ್, ಗುಜ್ರಾನ್ವಾಲಾ, ಲಾಹೋರ್, ಗುಜರಾತ್, ಮುಲ್ತಾನ್, ರಾವಲ್ಪಿಂಡಿ ಮತ್ತು ಸಿಯಾಲ್ಕೋಟ್, ಇಸ್ಲಾಮಾಬಾದ್, ಪೇಶಾವರ ಮತ್ತು ಮುಜಫರಾಬಾದ್ ಸೇರಿದಂತೆ ಪಂಜಾಬ್ ಪ್ರಾಂತ್ಯದ ನಗರಗಳಲ್ಲಿ ಮಾರ್ಚ್ 15ರಿಂದ ಮಾರ್ಚ್ 28ರವರೆಗೆ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗುವುದು. ಇತರೆಡೆ ಅರ್ಧದಷ್ಟು ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗುತ್ತಾರೆ ಎಂದು ಮಹಮೂದ್ ಹೇಳಿದರು.
ಶಾಲೆಗಳು, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಿಗೆ ಹಾಜರಾಗುವ ಸುಮಾರು 50 ದಶಲಕ್ಷ ಮಕ್ಕಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ. ಸಿಂಧ್ ಮತ್ತು ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಪರಿಸ್ಥಿತಿ ಸುಧಾರಿಸಿದ್ದು, ಶೇಕಡಾ 50ರಷ್ಟು ವಿದ್ಯಾರ್ಥಿಗಳು ತರಗತಿಗೆ ಹಾಜರಾಗಬಹುದು ಎಂದು ಅವರು ವಿವರಿಸಿದರು.