ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಈಶಾನ್ಯದ ಎಂಟು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಂಗಳವಾರ ಸಂವಾದ ನಡೆಸಲಿದ್ದಾರೆ. ಅಸ್ಸಾಂ, ನಾಗಾಲ್ಯಾಂಡ್, ತ್ರಿಪುರ, ಸಿಕ್ಕಿಂ, ಮಣಿಪುರ, ಮೇಘಾಲಯ, ಅರುಣಾಚಲ ಪ್ರದೇಶ ಮತ್ತು ಮಿಜೋರಾಂ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮೋದಿ ಮಾತನಾಡಲಿದ್ದಾರೆ.
ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಈಶಾನ್ಯ ಪ್ರದೇಶವು ಹೆಚ್ಚಿನ ಕಾಳಜಿಯನ್ನು ಹೊಂದಿದೆ ಎಂದು ತಜ್ಞರು ಗಮನಸೆಳೆದಿದ್ದಾರೆ. ಇತ್ತೀಚೆಗೆ ಸಂಶೋಧಕರ ತಂಡವನ್ನು ಮುನ್ನಡೆಸಿದ ಸೀತಭ್ರಾ ಸಿನ್ಹಾ ಪ್ರಕಾರ, ಮಣಿಪುರ, ಅರುಣಾಚಲ ಪ್ರದೇಶ ಮತ್ತು ತ್ರಿಪುರಾದಲ್ಲಿ ಪ್ರಕರಣಗಳ ಸಂಖ್ಯೆ ಏರಿಕೆ ಆಗಿದೆ ಎಂದು ಹೇಳಿದ್ದಾರೆ.
ಅವರ ವಿಶ್ಲೇಷಣೆಯ ಪ್ರಕಾರ, ಮಣಿಪುರದ ಆರ್-ಮೌಲ್ಯ 1.07, ಮೇಘಾಲಯ 0.92, ತ್ರಿಪುರ 1.15, ಮಿಜೋರಾಂ 0.86, ಅರುಣಾಚಲ ಪ್ರದೇಶ 1.14, ಸಿಕ್ಕಿಂ 0.88, ಅಸ್ಸಾಂ 0.86 ಆಗಿದೆ.