ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮತ್ತೆ ಇಂದು 16,436 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ 60 ಜನರು ಸಾವನ್ನಪ್ಪಿದ್ದಾರೆ.
ಈ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವ ಡಾ.ಕೆ.ಸುಧಾಕರ್ ಅವರು, ಬೆಂಗಳೂರಿನಲ್ಲಿ 6,640 ಸೇರಿದಂತೆ ರಾಜ್ಯಾಧ್ಯಂತ 16,436 ಜನರಿಗೆ ಕೋವಿಡ್ ಪಾಸಿಟಿವ್ ಎಂದು ದೃಢಪಟ್ಟಿರೋದಾಗಿ ತಿಳಿಸಿದ್ದಾರೆ.
ಸೋಂಕಿತರಾದ 44,819 ಜನರು ಗುಣಮುಖರಾಗಿದ್ದಾರೆ. ಹೀಗಾಗಿ ಬೆಂಗಳೂರಿನಲ್ಲಿ 71 ಸಾವಿರ ಸೇರಿ 1,48,800 ಸಕ್ರೀಯ ಸೋಂಕಿತರು ಇರುವುದಾಗಿ ಹೇಳಿದ್ದಾರೆ.
ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.11.31 ಆಗಿದೆ ಎಂದು ಮಾಹಿತಿ ನೀಡಿದ್ದಾರೆ.