ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ನಾಳೆಯಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗಲಿದ್ದು, ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಇದರ ನಡುವೆ ಪರೀಕ್ಷೆ ಬರೆಯಬೇಕಿದ್ದ 23 ಮಕ್ಕಳಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮಕ್ಕಳಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ.ಸುಮಂಗಲಾ ಮಾಹಿತಿ ನೀಡಿದ್ದಾರೆ.