Thursday, August 11, 2022

Latest Posts

ಸೈನಿಕ್ ಶಾಲೆಯ 54 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್: ಕ್ಯಾಂಪಸ್ ಕಂಟೈನ್ ಮೆಂಟ್ ವಲಯವೆಂದು ಘೋಷಣೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಹರಿಯಾಣದ ಕರ್ನಾಲ್ ಸಮೀಪವಿರುವ ಸೈನಿಕ್ ಶಾಲೆಯ 54 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ತರಗತಿಗಳು ಮತ್ತು ಇತರೆ ಶೈಕ್ಷಣಿಕ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಸೈನಿಕ್ ಶಾಲೆಯ ಕುಂಜ್‌ಪುರದ ಮೂವರು ವಿದ್ಯಾರ್ಥಿಗಳಿಗೆ ಸೋಮವಾರ ಪಾಸಿಟಿವ್ ಬಂದಿತ್ತು. ಬಳಿಕ ಆರೋಗ್ಯ ಇಲಾಖೆಯು 390 ವಿದ್ಯಾರ್ಥಿಗಳು ಮತ್ತು ಶಾಲೆಯ ಸಿಬ್ಬಂದಿಗಳ ಪರೀಕ್ಷೆ ನಡೆಸಿದ್ದು, ಅದರಲ್ಲಿ 54 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ ಕರ್ನಲ್ ಮುಖ್ಯ ವೈದ್ಯಾಧಿಕಾರಿ ಯೋಗೇಶ್ ಶರ್ಮಾ ಅವರು ಹೇಳಿದ್ದಾರೆ.
ಕೊರೋನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆ ಶಾಲಾ ಕಟ್ಟಡ ಮತ್ತು ಅದರ ವಸತಿ ನಿಲಯಗಳನ್ನು ಕಂಟೈನ್ ಮೆಂಟ್ ಜೋನ್ ಎಂದು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿಶಾಂತ್ ಕುಮಾರ್ ಯಾದವ್ ಅವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss