ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………
ಹೊಸದಿಗಂತ ವರದಿ, ಕೋಲಾರ:
ಜಿಲ್ಲೆಯಲ್ಲಿ ಸೋಮವಾರ ಕೋವಿಡ್ ಮಾರಿ ಅಟ್ಟಹಾಸ ಮುಂದುವರೆದಿದ್ದು, ಇಂದು ೬೨೨ ಮಂದಿಗೆ ಸೋಂಕು ಕಂಡು ಬಂದಿದ್ದು, ಐವರು ಸೋಂಕಿತರು ಸಾವನ್ನಪ್ಪಿದ್ದಾರೆ.
ಜಿಲ್ಲೆಯಲ್ಲಿ ಐವರು ಸೋಂಕಿತರು ಸಾವನ್ನಪ್ಪಿದ್ದು ಸೇರಿದಂತೆ ಈವರೆಗೂ ಒಟ್ಟು ಸಾವನ್ನಪ್ಪಿದವರ ಸಂಖ್ಯೆ ೨೩೭ಕ್ಕೆ ಏರಿದೆ.
ಈವರೆಗೂ ಒಟ್ಟು ಪ್ರಕರಣಗಳ ಸಂಖ್ಯೆ ೨೦೦೧೧ಕ್ಕೆ ಏರಿದೆ. ಇಂದು ಗುಣಮುಖರಾಗಿ ಬಿಡುಗಡೆಯಾಗಿರುವ ೯೪೯ ಮಂದಿ ಸೇರಿದಂತೆ ಈವರೆಗೂ ಒಟ್ಟು ೧೬೧೭೦ ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ೩೬೦೪ ಆಗಿದ್ದು, ಐಸಿಯುನಲ್ಲಿ ೩೨ ಮಂದಿ ಇದ್ದಾರೆ.
ಈವರೆಗೂ ಜಿಲ್ಲೆಯಲ್ಲಿ ೪೨೩೮೩ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ೪೬೨೩೭೨ ಮಾದರಿಗಳು ನೆಗಟಿವ್ ಎಂದು ವರದಿಯಾಗಿದೆ. ೮೮೩ ಮಂದಿಯ ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ.