ಮುಂಬೈ-ಗೋವಾ ಕ್ರೂಸ್ ಹಡಗಿನಲ್ಲಿದ್ದ 66 ಪ್ರಯಾಣಿಕರಿಗೆ ಕೊರೋನಾ ಪಾಸಿಟಿವ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಟ್ಟುನಿಟ್ಟಿನ ನಿರ್ಬಂಧಗಳ ನಡುವೆಯೂ ಮುಂಬೈ-ಗೋವಾ ಕ್ರೂಸ್ ಹಡಗಿನಲ್ಲಿದ್ದ 66 ಪ್ರಯಾಣಿಕರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಕ್ರೂಸ್ ಹಡಗಿನಲ್ಲಿದ್ದ ಒಬ್ಬ ಸಿಬ್ಬಂದಿಗೆಕೊರೋನಾ ಸೋಂಕು ದೃಢಪಟ್ಟ ಹಿನ್ನಲೆ ಸಹ ಪ್ರಯಾಣಿಕರನ್ನೂಪರೀಕ್ಷೆಗೆ ಒಳಪಡಿಲಾಗಿತ್ತು. ಈ ವೇಳೆ 66 ಮಂದಿಗೆ ಕೋವಿಡ್ -19 ಪಾಸಿಟಿವ್ ದೃಢಪಟ್ಟಿರುವುದು ತಿಳಿದಿದೆ.
ಹಡಗಿನಲ್ಲಿದ್ದ 2000ಕ್ಕೂ ಹೆಚ್ಚು ಪ್ರಯಾಣಿಕರು ಮತ್ತು ಸಿಬ್ಬಂದಿಗಳನ್ನು ಕೊರೊನಾ ಪರೀಕ್ಷೆ ಒಳಪಡಿಸಲಾಗಿತ್ತು.
ಭಾನುವಾರ ಪಿಪಿಇ ಕಿಟ್‌ಗಳನ್ನು ಧರಿಸಿದ ವೈದ್ಯಕೀಯ ತಂಡವು ಹಡಗಿನಲ್ಲಿದ್ದ ಪ್ರಯಾಣಿಕರು ಮತ್ತು ಸಿಬ್ಬಂದಿಗಳ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!