Thursday, July 7, 2022

Latest Posts

ಎಂವಿ ಶೆಟ್ಟಿ ಪ್ಯಾರಾಮೆಡಿಕಲ್ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್

ಹೊಸ ದಿಗಂತ ವರದಿ,ಮಂಗಳೂರು:

ಕಾವೂರು ವಿದ್ಯಾನಗರದ ಎಂವಿ ಶೆಟ್ಟಿ ಪ್ಯಾರಾಮೆಡಿಕಲ್ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಹಾಸ್ಟೆಲ್‌ನ್ನು ಕಂಟೈನ್‌ಮೆಂಟ್ ಝೋನ್ ಆಗಿ ಘೋಷಿಸಲಾಗಿದೆ.
ಕಾಲೇಜಿನ ಅಂದಾಜು 18 ವರ್ಷ ವಯಸ್ಸಿನ 173 ವಿದ್ಯಾರ್ಥಿಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಪೈಕಿ ಶನಿವಾರದಿಂದ ಸೋಮವಾರದವರೆಗೆ ಒಟ್ಟು 9 ಮಂದಿಗೆ ಪಾಸಿಟಿವ್ ಇರುವುದು ಪತ್ತೆಯಾಗಿದೆ. ಸೋಂಕಿತ ವಿದ್ಯಾರ್ಥಿಗಳು 15 ದಿನಗಳಲ್ಲಿ ಕೇರಳದಿಂದ ಆಗಮಿಸಿದವರಾಗಿದ್ದಾರೆ. ಸೋಂಕಿತರನ್ನು ಪ್ರತ್ಯೇಕವಾಗಿ ನಿಗಾವಣೆಯಲ್ಲಿ ಇರಿಸಲಾಗಿದೆ. ಸೋಂಕಿತರ ಸಂಪರ್ಕಿತ ವಿದ್ಯಾರ್ಥಿಗಳು ಕ್ವಾರಂಟೈನ್‌ನಲ್ಲಿ ಇದ್ದಾರೆ. ಏಳು ದಿನಗಳ ಬಳಿಕ ಈ ಎಲ್ಲ ವಿದ್ಯಾರ್ಥಿಗಳನ್ನು ಮತ್ತೆ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss