Saturday, December 9, 2023

Latest Posts

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಕೊರೋನಾ ಪಾಸಿಟಿವ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಅವರು ಸ್ವಯಂ ಐಸೋಲೇಷನ್ ಆಗಿದ್ದಾರೆ.
ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿಯನ್ನು ಹಂಚಿಕೊಂಡ ಸಿಎಂ ಕಚೇರಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ. ವೈದ್ಯರ ಸಲಹೆಯಂತೆ ಹೋಂ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸಂಪರ್ಕಕ್ಕೆ ಬಂದ ಎಲ್ಲರೂ ಕೋವಿಡ್ ಮುಂಜಾಗ್ರತಾ ಕ್ರಮಗಳಂತೆ ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!