ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಇಬ್ಬರು ಆಟಗಾರರಿಗೆ ಕೊರೋನಾ ದೃಢಪಟ್ಟ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಿಇಒ ಸೇರಿದಂತೆ ಮೂವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಸಿಎಸ್ಕೆ ಸಿಇಒ ಕಾಶಿ ವಿಶ್ವನಾಥ್, ಬೌಲಿಂಗ್ ಕೋಚ್ ಲಕ್ಷ್ಮೀಪತಿ ಬಾಲಾಜಿ ಮತ್ತು ನಿರ್ವಹಣಾ ವಿಭಾಗದ ಒಬ್ಬರಿಗೆ ಸೋಮವಾರ ಪಾಸಿಟಿವ್ ದೃಢಪಟ್ಟಿದೆ. ಇದು ತಪ್ಪಾಗಿ ಈ ವರದಿ ಬಂದಿರಬಹುದು ಎನ್ನಲಾಗುತ್ತಿದ್ದು, ಮತ್ತೊಮ್ಮೆ ಕೋವಿಡ್ ಟೆಸ್ಟ್ಗೆ ಒಳಗಾಗಲಿದ್ದಾರೆ.
ಒಂದು ವೇಳೆ ಈ ಪರೀಕ್ಷೆಯಲ್ಲೂ ಪಾಸಿಟಿವ್ ಬಂದರೆ 10 ದಿನಗಳ ಕಾಲ ಬಯೋ ಬಬಲ್ ನಿಂದ ಹೊರಗೆ ಐಸೋಲೇಟ್ ಆಗಬೇಕಾಗುತ್ತದೆ. ನಂತರ 2 ನೆಗೆಟಿವ್ ಫಲಿತಾಂಶ ಬಂದ ಮೇಲೆ ಬಬಲ್ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.
ಇದಕ್ಕೂ ಮೊದಲು ಇಂದು ಆರ್ಸಿಬಿ ವಿರುದ್ಧ ಪಂದ್ಯವನ್ನಾಡಬೇಕಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವರುಣ್ ಚಕ್ರವರ್ತಿ ಮತ್ತು ಸಂದೀಪ್ ವಾರಿಯರ್ಸ್ಗೆ ಕೋವಿಡ್ 19 ಪಾಸಿಟಿವ್ ಬಂದಿದ್ದು, ಇಂದಿನ ಪಂದ್ಯವನ್ನು ಮುಂದೂಡಲಾಗಿತ್ತು. ಆದರೆ, ತಂಡದ ಇತರ ಆಟಗಾರರಿಗೆ ನೆಗೆಟಿವ್ ಬಂದಿದ್ದರಿಂದ ಆ ಇಬ್ಬರನ್ನು ಮಾತ್ರ ಐಸೋಲೇಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.